• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ

Tulunadu News Posted On September 16, 2025
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳವಾರ ಬೃಹತ್ ಪ್ರತಿಭಟನಾ ಧರಣಿ ನಡೆಯಿತು. ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ನೇರ ಕಾರಣವಾಗಿ ಜನಸಾಮಾನ್ಯರಿಗೆ ತೀವ್ರ ಸಂಕಷ್ಟ ತಂದೊಡ್ಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು

ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ ನಡೆದ ಪ್ರತಿಭಟನೆಯು ಮುಂಜಾನೆ 9 ಗಂಟೆಗೆ ಆರಂಭಗೊಂಡಿದ್ದು ನಂಜೆ 5 ಗಂಟೆಯವರೆಗೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಬಿಜೆಪಿ ನಾಯಕರು ಖಾಲಿ ಬುಟ್ಟಿ, ಹಾರೆ, ಪಿಕ್ಕಾನು ಹಿಡಿದುಕೊಂಡು ಪ್ರತಿಭಟನೆಗೆ ಚಾಲನೆ ನೀಡಿ, ರಾಜ್ಯ ಸರಕಾರದ ವಿರುದ್ಧ, ದಿನೇಶ್ ಗುಂಡೂರಾವ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ , ಕಾಂಗ್ರೆಸ್ ನಾಯಕರ ಶರ್ಟ್ಿನ ಕಾಲರ್ ಪಟ್ಟಿ ಹಿಡಿಯುವ ದಿನ ಶೀಘ್ರದಲ್ಲೇ ಬರತ್ತೆ. ಅಲ್ಲದೆ ಜಿಲ್ಲೆಯ ಸಚಿವರು ಕಾಣೆಯಾಗಿದ್ದಾರೆ. ನಮ್ಮ ಜಿಲ್ಲೆಯ ಸ್ಪೀಕರ್ ವಿದೇಶದಲ್ಲಿ ಇದ್ದಾರೆ. ಸಮಸ್ಯೆಯನ್ನ ಬಗೆಹರಿಸದೆ 30 ಬಾರಿ ವಿದೇಶ ಪ್ರಯಾಣ ಮಾಡ್ತಾರೆ. ಇವರನ್ನ ಕಿತ್ತು ಬಿಸಾಡಬೇಕು. ಕೆಂಪು ಕಲ್ಲು, ಮರಳು ಸಮಸ್ಯೆ ಬಗ್ಗೆ ರಾಜ್ಯದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವರಿಕೆ ಮಾಡುವ ಕೆಲಸ ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಆದರೆ ಏನೂ ಫಲಪ್ರದವಾಗಿಲ್ಲ. ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದು ಸರಕಾರ ಸೃಷ್ಟಿಸಿರುವ ಸಮಸ್ಯೆಯಾಗಿದೆ. ಸರಕಾರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ. ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸ್ಪಿಕರ್ ಯು ಟಿ ಖಾದರ್ ಅವರು ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹರಿಹಾಯ್ದರು.

ಪ್ರತಿಭಟನೆಯಲ್ಲಿ ಬಂದರು ಬಂದರು ಗುಂಡೂರಾಯರು ,ತಿಂಗಳಿಗೆ ಒಮ್ಮೆಯೂ ಕಾಣದಾದರೂ ಗೀತೆಯನ್ನ ಪ್ರತಿಭಟನಾ ನಿರತರು ಹಾಡಿ ಟ್ರೊಲ್ ಮಾಡುತಿದ್ದರು.

ಪ್ರತಿಭಟನೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, , ಉಮಾನಾಥ ಕೋಟ್ಯಾನ್, ಎಂಎಲ್‌ಸಿ ಕಿಶೋರ್ ಕುಮಾ‌ರ್ ಪುತ್ತೂರು, ಕ್ಯಾ.ಗಣೇಶ್ ಕಾರ್ಣಿಕ್ ಸೇರಿದಂತೆ ಬಹಳಷ್ಟು ಸಂಖ್ಯೆಯ ಕಾರ್ಯಕರ್ತರು ನೆರೆದಿದ್ದರು.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search