• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!

Tulunadu News Posted On September 19, 2025
0


0
Shares
  • Share On Facebook
  • Tweet It

ಮೈಸೂರು ದಸರಾ ಮಹೋತ್ಸವವವನ್ನು ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ವಿವಾದಕ್ಕೆ ಕಾರಣವಾಗಿದ್ದ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದಕ್ಕೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ.

ಬೆಂಗಳೂರಿನ ಹಾಲನಾಯಕನಹಳ್ಳಿಯ ನಿವಾಸಿ ಎಚ್.ಎಸ್. ಗೌರವ್ ಎಂಬುವವರು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾ. ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದ ಆಲಿಸಿದ ಪೀಠ, ‘ನಮ್ಮ ದೇಶದ ಸಂವಿಧಾನದ ಪ್ರಸ್ತಾವನೆ ಏನು?’ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಲು ಅರ್ಜಿದಾರರು 3 ನಿಮಿಷ ಸಮಯ ಕೋರಿದರು.

ದೂರುದಾರರು, ದಸರಾ ಉದ್ಘಾಟನೆಯಂತಹ ಧಾರ್ಮಿಕ ಸಮಾರಂಭವನ್ನು ಅನ್ಯ ಧರ್ಮದ ವ್ಯಕ್ತಿ ಉದ್ಘಾಟಿಸುವುದು ಸೂಕ್ತವಲ್ಲ ಎಂದು ವಾದಿಸಿದರು. ಇದೊಂದು ರಾಜಕೀಯ ಉದ್ದೇಶದಿಂದ ಮಾಡಿದ ಕ್ರಮ ಎಂದು ಅರ್ಜಿದಾರರು ಆರೋಪಿಸಿದರು. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು. ಉಭಯ ವಾದ ಆಲಿಸಿದ ನಂತರ, ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತು. ಈ ತೀರ್ಪಿನ ಮೂಲಕ ಸುಪ್ರೀಂ ಕೋರ್ಟ್, ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ. ಈ ವಿವಾದ ಈಗ ಕಾನೂನಾತ್ಮಕವಾಗಿ ಅಂತ್ಯಗೊಂಡಂತಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search