• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸಿನಿಮಾ

ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

Tulunadu News Posted On October 27, 2025
0


0
Shares
  • Share On Facebook
  • Tweet It

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 ಅಕ್ಟೋಬರ್ 2 ರಂದು ಬಿಡುಗಡೆಯಾಗಿ ದೇಶದಾದ್ಯಂತ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿರುವುದು ಎಲ್ಲರಿಗೂ ಗೊತ್ತೆ ಇದೆ. ಈ ಸಿನೆಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಅದಕ್ಕೆ ದಿನ ನಿಗದಿಯಾಗಿದೆ. ಇದೇ ತಿಂಗಳು ಅಂದರೆ ಅಕ್ಟೋಬರ್ 21 ರಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಈ ಸಿನೆಮಾದ ಸ್ಟ್ರೀಮಿಂಗ್ ಆಗಲಿದೆ. ಈ ಬಗ್ಗೆ ಅಮೆಜಾನ್ ಪ್ರೈಮ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.

ಅಷ್ಟಕ್ಕೂ ಕಾಂತಾರಾ ಚಾಪ್ಟರ್ ಒನ್ ಇದರ ಗಳಿಕೆ ಎಷ್ಟು ಎನ್ನುವ ಬಗ್ಗೆ ಕುತೂಹಲ ಎಲ್ಲರಲ್ಲಿಯೂ ಇದೆ. ಕರ್ನಾಟಕ ರಾಜ್ಯವೊಂದರಲ್ಲಿಯೇ 250 ಕೋಟಿ ಗಳಿಕೆಯ ಗಡಿ ದಾಟಿದ ಮೊದಲ ಕನ್ನಡ ಚಲನಚಿತ್ರ ಎಂಬ ಐತಿಹಾಸಿಕ ದಾಖಲೆಯನ್ನು ಬರೆದಾಗಿದೆ. ಕನ್ನಡ ಸಿನೆಮಾ ಮತ್ತು ಕರ್ನಾಟಕದ ಇತಿಹಾಸದಲ್ಲಿ ರಾಜ್ಯದಲ್ಲಿ 200 ಕೋಟಿಗಿಂತ ಹೆಚ್ಚು ಗಳಿಕೆ ಮಾಡಿದ ಏಕೈಕ ಚಲನಚಿತ್ರ “ಕಾಂತಾರ ಚಾಪ್ಟರ್ 1”. “ಕಾಂತಾರ” ಚಿತ್ರವು ಕನ್ನಡ ನೆಲದ ಕಥೆ, ಸಂಸ್ಕೃತಿ ಮತ್ತು ನಂಬಿಕೆಯನ್ನು ಕಥಾವಸ್ತುವನ್ನು ಹೊಂದಿದೆ. ಈ ಅಸಾಮಾನ್ಯ ಯಶಸ್ಸು ಕನ್ನಡ ಚಿತ್ರರಂಗಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸಿದೆ ಮತ್ತು ಪ್ರಾದೇಶಿಕ ಚಲನಚಿತ್ರಗಳ ಸಾಮರ್ತ್ಯವನ್ನು ಜಗತ್ತಿಗೆ ತೋರಿಸಿದೆ.

2025ರಲ್ಲಿ ಅತೀ ಹೆಚ್ಚು ಹಣ ಗಳಿಸಿದ ಭಾರತೀಯ ಸಿನೆಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾತ್ರವಲ್ಲ, ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 818 ಕೋಟಿಗೂ ಅಧಿಕ ಹಣ ಸಂಪಾದಿಸಿದೆ. “ಕಾಂತಾರ ಚಾಪ್ಟರ್ 1” 2025 ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search