• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

Tulunadu News Posted On October 28, 2025
0


0
Shares
  • Share On Facebook
  • Tweet It

ಭಿಕ್ಷಾಟನೆಯನ್ನು ನಿಲ್ಲಿಸಲು ರಾಜ್ಯ ಸರಕಾರ ಕಳೆದ 4 ವರ್ಷಗಳ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸುಮಾರು 7093 ಕೋಟಿ ಮೊತ್ತವನ್ನು ಭಿಕ್ಷುಕರ ಸೆಸ್ ರೂಪದಲ್ಲಿ ಸಂಗ್ರಹ ಮಾಡಿದೆ. ಆದರೂ ರಸ್ತೆಗಳಲ್ಲಿ ಮಕ್ಕಳ ಭಿಕ್ಷಾಟನೆ ಮುಂದುವರೆದಿದೆ” ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ “ಲೆಟ್ಸ್ ಕಿಟ್ ಫೌಂಡೇಶನ್” ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ” ಇದು ಎಲ್ಲವೂ ಸರಿಯಿಲ್ಲ ಎಂಬುದನ್ನು ಸೂಚಿಸುತ್ತದೆ” ಎಂದು ಸರಕಾರದ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಪುತ್ತಿಗೆ ಆರ್. ರಮೇಶ್ ” ಸರಕಾರ ನೀಡಿರುವ ಮಾಹಿತಿಯ ಅನುಸಾರ 2021 – 22ರಿಂದ 2024 – 25 ರವರೆಗೆ 4 ವರ್ಷಗಳ ಅವದಿಯಲ್ಲಿ ಒಟ್ಟು 7,093 ಕೋಟಿ ಸೆಸ್ ಸಂಗ್ರಹ ಮಾಡಲಾಗಿದೆ. ಅದರಲ್ಲಿ 3,453 ಕೋಟಿಯಷ್ಟು ಖರ್ಚು ಮಾಡಲಾಗಿದೆ. ಅದರೂ ಮಕ್ಕಳ ಭಿಕ್ಷಾಟನೆ ನಿಂತಿಲ್ಲ” ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ “ಎಷ್ಟು ಸೆಸ್ ಸಂಗ್ರಹ ಮಾಡಲಾಗಿದೆ. ಎಷ್ಟು ಖರ್ಚು ಮಾಡಲಾಗಿದೆ ಹಾಗೂ ಬಾಕಿ ಹಣದ ಲೆಕ್ಕ ನೀಡಿ” ಎಂದು ಸರಕಾರಕ್ಕೆ ಸೂಚಿಸಿತು. ಅಂತೆಯೇ ಸೆಸ್ ಸಂಗ್ರಹದ ಕುರಿತು ಎಲ್ಲಾ ಅಂಕಿ ಅಂಶ ಸಂಗ್ರಹಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶಿಸಿತು.

ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಿರುವ ಭಿಕ್ಷುಕರ ಸೆಸ್ ಅನ್ನು ರಿಕವರಿ ಮಾಡಿಕೊಳ್ಳಲು ಸರಕಾರ ಯಾವ ಕ್ರಮ ಕೈಗೊಂಡಿದೆ ಎಂಬ ಬಗ್ಗೆ ಮುಂದಿನ ವಿಚರಣೆ ವೇಳೆ ಮಾಹಿತಿ ನೀಡಿ” ಎಂದು ಸರಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು 8 ವಾರಗಳ ಕಾಲ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?

“ಬೆಂಗಳೂರಿನ ಬೀದಿಗಳಲ್ಲಿ ಪ್ರಮುಖವಾಗಿ ಸಂಚಾರಿ ಸಿಗ್ನಲ್ ಗಳಲ್ಲಿ ಪೆನ್, ಆಟಿಕೆಗಳು, ಇಯರ್ ಬಡ್ ಮತ್ತಿತ್ತರ ವಸ್ತುಗಳನ್ನು ಮಾರಾಟ ಮಾಡಲು ಹಾಗೂ ಭಿಕ್ಷಾಟನೆಗೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಇದು ಬಾಲ ನ್ಯಾಯ ಕಾಯ್ದೆ ಹಾಗೂ ಸಂವಿಧಾನದ 21 ನೇ ವಿಧಿಯ ಉಲ್ಲಂಘನೆ. ಆದ್ದರಿಂದ ಮಕ್ಕಳನ್ನು ಮಾರಾಟದ ಕೆಲಸಕ್ಕೆ ಬಳಸಿಕೊಳ್ಳದಂತೆ ಹಾಗೂ ಅವರನ್ನು ಶಾಲೆಗಳಿಗೆ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ, ಬಿಬಿಎಂಪಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶಿಸಬೇಕು” ಎಂದು ಅರ್ಜಿದಾರರ ಕೋರಿಕೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search