• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

Tulunadu News Posted On January 16, 2026
0


0
Shares
  • Share On Facebook
  • Tweet It

ಡಿಮಾರ್ಟ್ ಶಾಪಿಂಗ್‌ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರಾತು ; ಕುಂಪಲ ನಿರ್ಮಾಣ ಹಂತದ ಡಿಮಾರ್ಟ್ ಶಾಖೆಗೆ ಮುಗಿಬಿದ್ದ ಜನರು, ಸೆಕ್ಯುರಿಟಿ ಮಾತು ಕೇಳಿ ಉದ್ಯೋಗಾಕಾಂಕ್ಷಿಗಳಿಗೆ ಶಾಕ್ !

Jan 16: ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ಸಂಸ್ಥೆಯ ಶಾಖೆಯೊಂದು ಉಳ್ಳಾಲ ತಾಲೂಕಿನ ಕುಂಪಲ- ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ ವಿಘ್ನ ಸಂತೋಷಿಗಳು ಜಾಲತಾಣಗಳಲ್ಲಿ ಜಾಹಿರಾತು ಹರಿಯಬಿಟ್ಟಿದ್ದು, ಉದ್ಯೋಗ ಅರಸಿ ಮಾಲ್ ಕಡೆಗೆ ಧಾವಿಸಿ ಬಂದ ನೂರಾರು ಮುಗ್ಧ ಜನರಿಗೆ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿಯ ಮಾತು ಕೇಳಿ ಶಾಕ್ ಆಗಿದೆ.

ಸಾಮಾಜಿಕ ಜಾಲತಾಣವನ್ನ ಎಷ್ಟರ ಮಟ್ಟಿಗೆ ದುರುಪಯೋಗ ಪಡಿಸಬಹುದೆಂಬುದಕ್ಕೆ ಕುಂಪಲ -ಬೈಪಾಸಿನ ನೂತನ ಡಿಮಾರ್ಟ್ ನಲ್ಲಿ ಉದ್ಯೋಗಾವಕಾಶದ ಜಾಹಿರಾತು ಹರಿಯಬಿಟ್ಟ ಬೆಳವಣಿಗೆಯೇ ನಿದರ್ಶನ. ಜಾಲತಾಣಗಳಲ್ಲಿ ಇಂತಹ ಕಂಟೆಂಟ್ ಗಳನ್ನ ಸೃಷ್ಟಿಸುವವರಿಗೆ ಮನಸ್ಸಿಗೆ ಒಂದಷ್ಟು ವಿಘ್ನ ಸಂತೋಷ ಲಭಿಸಬಹುದು. ಆದರೆ ಇಂತಹ ಸುಳ್ಳು ಜಾಹಿರಾತುಗಳನ್ನೇ ನಂಬಿ ಕೆಲಸ ಅರಸಿ ಬಂದವರ ಗೋಳನ್ನು ಕೇಳುವಾಗ ಎಂಥವರಿಗೂ ಬೇಸರವಾಗದೆ ಇರಲಾರದು.

ಕುಂಪಲ- ಬೈಪಾಸ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಡಿಮಾರ್ಟ್ ಶಾಪಿಂಗ್ ಮಾಲ್ ಗೆ ಸಿಬ್ಬಂದಿಗಳು ಬೇಕಾಗಿದ್ದು, ಅನಕ್ಷರಸ್ಥರಿಂದ ಹಿಡಿದು ಪದವೀಧರರಿಗೂ ಉದ್ಯೋಗಾವಕಾಶಗಳು ಲಭ್ಯವಿದೆಯೆಂಬ ಜಾಹಿರಾತನ್ನು ಹರಿಯಬಿಟ್ಟಿದ್ದು ಕಳೆದ ನಾಲೈದು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ ಜಾಹಿರಾತಿನಲ್ಲಿ ಡಿಮಾರ್ಟ್ ಸಂಸ್ಥೆಗೆ ಸಂಬಂಧಿಸಿದ ಯಾವುದೇ ಫೋನ್ ನಂಬ‌ರ್, ಈಮೇಲ್ ವಿಳಾಸಗಳನ್ನು ಹಾಕಿಲ್ಲ. ಅನೇಕ ಮಂದಿ ಸುಶಿಕ್ಷಿತರು ಕೂಡ ಇಂತಹ ಜಾಹಿರಾತುಗಳನ್ನ ಸರಿಯಾಗಿ ಪರಿಶೀಲಿಸದೆ ವಿವಿಧ ವಾಟ್ಸಪ್ ಗ್ರೂಪ್ತಳಿಗೆ ನೂಕಿದ್ದಲ್ಲದೆ, ತಮ್ಮ ಸ್ಟೇಟಸ್ ಗಳಿಗೂ ಅಪ್ಲೋಡ್ ಮಾಡಿದ್ದರು.

ಇದನ್ನೇ ನಂಬಿದ ಮುಗ್ಧ ಜನರು ನಿನ್ನೆಯಿಂದ ಬೈಪಾಸಿನ ಡಿಮಾರ್ಟ್ ಎದುರಲ್ಲಿ ಜಮಾಯಿಸಿದ್ದು ಕೆಲಸಕ್ಕಾಗಿ ಮುಗಿ ಬಿದ್ದಿದ್ದಾರೆ. ಅಸಲಿಗೆ ಡಿಮಾರ್ಟ್ ಸಂಸ್ಥೆಯು ಉದ್ಯೋಗಾವಕಾಶದ ಬಗ್ಗೆ ಯಾವುದೇ ಜಾಹಿರಾತು ನೀಡಿಲ್ಲವೆಂದು ಉದ್ಯೋಗ ಅರಸಿ ಬಂದ ಜನರಲ್ಲಿ ಡಿಮಾರ್ಟ್‌ ಸೆಕ್ಯುರಿಟಿ ಸಿಬ್ಬಂದಿ ಸಮಜಾಯಿಷಿ ನೀಡಿ ಬೇಸ್ತು ಬಿದ್ದಿದ್ದಾರೆ.

ಇದೇ ಫೆಬ್ರವರಿ ತಿಂಗಳ ಕೊನೆಯೊಳಗೆ ಡಿಮಾರ್ಟ್ ಶಾಪಿಂಗ್ ಮಾಲ್ ವಹಿವಾಟು ಆರಂಭಿಸಲಿದ್ದು, ಕಟ್ಟಡದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಾಗಲೇ ನಿನ್ನೆಯಿಂದ ಸುಮಾರು ಐನೂರಕ್ಕೂ ಅಧಿಕ ಮಂದಿ ಇಲ್ಲಿಗೆ ಉದ್ಯೋಗ ಅರಸಿ ಬರುತ್ತಲೇ ಇದ್ದಾರೆಂದು ಡಿಮಾರ್ಟ್ ಶಾಪಿಂಗ್ ಮಾಲ್ ನ ಸೆಕ್ಯುರಿಟಿ ಸಿಬ್ಬಂದಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search