• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

Tulunadu News Posted On February 12, 2026
0


0
Shares
  • Share On Facebook
  • Tweet It

ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪ ! ಮ್ಯಾಟ್ರಿಮನಿ ಸೈಟ್ ನಲ್ಲಿ ನಂಬಿಸಿ ಉಂಡೂ ಹೋದ ಕೊಂಡೂ ಹೋದ, ಇವ ಕಾವೂರ ಪೋರ !

ನಗರದ ಕಾವೂರು ಮೂಲದ ಯುವಕನೊಬ್ಬ ಮ್ಯಾಟ್ರಿಮನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈದು ಕಂತ್ರಿ ಬುದ್ಧಿ ತೋರಿಸಿ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಕಾವೂರು ಮೂಲದ ಸುಶಾಂತ್ ಪೂಜಾರಿ ಅಲಿಯಾಸ್ ಸುಶಾಂತ್ ಅಂಕುಶ್ ಪೂಜಾರಿ, ಸುಶಾಂತ್ ಜಿ. ಕರ್ಕೇರಾ (32) ಎಂದು ಕರೆಸಿಕೊಳ್ಳುತ್ತಿದ್ದ ಯುವಕ ಮತ್ತು ಈತನಿಗೆ ಮುಂಬೈನಲ್ಲಿ ಮದುವೆಯಾಗಲು ಸಹಕರಿಸಿದ್ದ ಮುಲ್ಕಿ ನಿವಾಸಿ ಭಾಸ್ಕ‌ರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಮೂಲದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿ ಮ್ಯಾಟ್ರಿಮೊನಿ ಸೈಟ್ ಮೂಲಕ ಪರಿಚಯವಾಗಿದ್ದು ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 2025ರ ಫೆ.2ರಂದು ಆಕೆಯನ್ನು ಮದುವೆಯಾಗಿದ್ದ. ಆನಂತರ, ಹಂತ ಹಂತವಾಗಿ 6,60,000 ರೂ. ಹಣವನ್ನು ಪಡೆದು ಕಳೆದ ನವೆಂಬರ್ 15ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ಮಹಿಳೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರನ್ನು ಮೋಸ ಮಾಡಿರುವ ವಿಷಯ ತಿಳಿದುಬಂದಿದೆ.

ಅಲ್ಲದೆ, ಈತನಿಗೆ ಈ ಮೊದಲು ಒಂದು ಮದುವೆ ಆಗಿರುವ ವಿಚಾರವೂ ತಿಳಿದ ಮೇರೆಗೆ ನೊಂದ ಮುಂಬೈ ಮೂಲದ ಮಹಿಳೆ : 184/2025 00: 318(4), 316(2), 316(1), 336(3), 340(1) 2 2 2 3 ថថ ದಾಖಲಿಸಿದ್ದರು. ಸದ್ರಿ ಪ್ರಕರಣದ ಆರೋಪಿ ಸುಶಾಂತ್ ಪೂಜಾರಿಯನ್ನು ಫೆ.05ರಂದು ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ. ವಿಚಾರಣೆ ನಡೆಸಿದಾಗ ಆರೋಪಿ ಸುಶಾಂತ್ ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಈ ಮೊದಲು 2021ರಲ್ಲಿ ಉಡುಪಿ ಮೂಲದ ಯುವತಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಉಡುಪಿಯಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದಿದ್ದಾನೆ. ಮುಂಬೈನಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ.

ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವ ಭರವಸೆಯಿಂದ ಮೋಸ ಮಾಡಿದ್ದಾನೆ. ಕಾರ್ಕಳದಲ್ಲಿ ಒಬ್ಬಳು ಹುಡುಗಿಯನ್ನು ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿರುವ ಬಗ್ಗೆಯೂ ಪೊಲೀಸರ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ಆರೋಪಿ ಸುಶಾಂತ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಸದ್ರಿ ಪ್ರಕರಣದಲ್ಲಿ ಆರೋಪಿ ಸುಶಾಂತ್ ಪೂಜಾರಿಗೆ ಮುಂಬೈನಲ್ಲಿ ಮದುವೆಯಾಗಲು ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತ ಸಹಕರಿಸಿದ್ದಾನೆ. ಮುಂಬೈನ ಮಹಿಳೆಯ ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿ ಸುಶಾಂತ್ ತನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಮೋಸ ಮಾಡಿದ್ದಾನೆ. ಸುಶಾಂತ್ ಪೂಜಾರಿ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೊಂಡಿದ್ದ. ಇದಕ್ಕಾಗಿ ಈತನನ್ನೂ ದಸ್ತಗಿರಿ ಮಾಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಹಲವಾರು ಹೆಂಡಿರ ಮುದ್ದಿನ ಗಂಡ ಆರೋಪಿ ಸುಶಾಂತ್ ಪೂಜಾರಿ ವಿರುದ್ಧ ಮಂಗಳೂರು ಉರ್ವಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2), (ಎನ್) 342, ಜೊತೆಗೆ 34 ಐಪಿಸಿ ಕಲಂ:3, 4, 5 ಸೇರಿದಂತೆ ಕಲಂ:4, 8, 12 ಪೋಕೋ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search