ಹಿಂದೂಗಳ ಹತ್ಯೆಯಾದಾಗ ಏಕೆ ಸೊಲ್ಲೆತ್ತಲ್ಲ: ರವಿಶಂಕರ್
Posted On September 8, 2017
ದೆಹಲಿ: ಕೇರಳ ಹಾಗೂ ಕರ್ನಾಟಕದಲ್ಲಿ ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರ ಕೊಲೆಯಾಗುತ್ತಿದ್ದರೂ ಸರಕಾರಗಳು ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ರಾಹುಲ್ ಗಾಂಧಿ ನಿರಾಧಾರವಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ದಾರೆ. ಆದರೆ ಅದೇ, ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರ ಹತ್ಯೆಯಾದಾಗ ಸೊಲ್ಲೆತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೇರಳದಲ್ಲಿ ಹಿಂದೂಗಳ ಹತ್ಯೆಯಾಗುತ್ತಿಿದೆ. ಕರ್ನಾಟಕದಲ್ಲೂ ಇದೇ ಮುಂದುವರಿದಿದೆ. ಆಗೆಲ್ಲ ಸುಮ್ಮನಿರುವ ಅವರು, ಗೌರಿ ಹತ್ಯೆಯಲ್ಲಿ ಸುಖಾಸುಮ್ಮನೆ ಬಿಜೆಪಿಯತ್ತ ಬೆರಳು ಮಾಡುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದರೆ ಕೊಲೆಯೇ ಗತಿ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.
- Advertisement -
Leave A Reply