• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

Tulunadu News Posted On April 7, 2026
0


0
Shares
  • Share On Facebook
  • Tweet It

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ

ಹೊಸದಿಲ್ಲಿ, :ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಬೃಹತ್ ಸಾಂವಿಧಾನಿಕ ಪೀಠವು ಈ ಐತಿಹಾಸಿಕ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ವಿಚಾರಣೆಯ ಮೊದಲ ದಿನವಾದ ಇಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯಗಳ ಪರವಾಗಿ ಪ್ರಬಲ ವಾದ ಮಂಡಿಸಿದರು. “ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಧಾರ್ಮಿಕ ಪಂಗಡಗಳ ಆಚಾರ-ವಿಚಾರಗಳನ್ನು ಕೇವಲ ಪಾಶ್ಚಿಮಾತ್ಯ ತರ್ಕ ಅಥವಾ ಸಾಂವಿಧಾನಿಕ ನೈತಿಕತೆಯ ಅಡಿಯಲ್ಲಿ ಅಳೆಯಲು ಸಾಧ್ಯವಿಲ್ಲ. ಪ್ರತಿಯೊಂದು ಧಾರ್ಮಿಕ ಪೀಠಕ್ಕೂ ತನ್ನದೇ ಆದ ವಿಶಿಷ್ಟ ಸಂಪ್ರದಾಯಗಳನ್ನು ಪಾಲಿಸುವ ಸ್ವಾಯತ್ತತೆ ಇರಬೇಕು,” ಎಂದು ಅವರು ಪ್ರತಿಪಾದಿಸಿದರು. ಶಿರಡಿ ಸಾಯಿಬಾಬಾ ಮಂದಿರ ಮತ್ತು ಅಜ್ಮೀರ್ ದರ್ಗಾದಂತಹ ಉದಾಹರಣೆಗಳನ್ನು ನೀಡಿದ ಅವರು, ಧಾರ್ಮಿಕ ವಿಷಯಗಳಲ್ಲಿ ನ್ಯಾಯಾಂಗದ ಹಸ್ತಕ್ಷೇಪವು ಅತ್ಯಂತ ಸೀಮಿತವಾಗಿರಬೇಕು ಎಂದು ಕೋರಿದರು.

ಶಬರಿಮಲೆಯಲ್ಲಿ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವು ಅಯ್ಯಪ್ಪ ಸ್ವಾಮಿಯ ‘ನೈಷ್ಠಿಕ ಬ್ರಹ್ಮಚಾರಿ’(ಜೀವನಪೂರ್ತಿ ಬ್ರಹ್ಮಚರ್ಯಕ್ಕೆ ಕಟ್ಟಿಬದ್ಧನಾದವನು) ಸ್ವಭಾವದಿಂದ ಉಗಮಿಸಿದ್ದು, ಅದು ಅಶುದ್ಧತೆ ಅಥವಾ ಕೀಳರಿಮೆ ಆಧಾರಿತವಲ್ಲ ಎಂದು ಕೇಂದ್ರವು ವಿಚಾರಣೆಗೆ ಮುನ್ನ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ ತಿಳಿಸಿದೆ.

“ಮಹಿಳೆಯರಿಗೆ ಪ್ರವೇಶ ನೀಡಿದರೆ ದೇವಸ್ಥಾನದ ಪೂಜಾ ಪದ್ಧತಿಯ ಸ್ವರೂಪವೇ ಬದಲಾಗುತ್ತದೆ. ಇದರಿಂದ ಸಂವಿಧಾನ ರಕ್ಷಿಸುವ ಧಾರ್ಮಿಕ ವೈವಿಧ್ಯತೆ ದುರ್ಬಲವಾಗಬಹುದು ಎಂದು ಕೇಂದ್ರ ಸರಕಾರ ಹೇಳಿದೆ. ಶತಮಾನಗಳಿಂದ ಭಕ್ತರು ಸಂಪ್ರದಾಯದಂತೆ ಪೂಜೆ ಮಾಡುತ್ತಿದ್ದಾರೆ” ಎಂದು ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಈ ವಿಷಯವು ಧಾರ್ಮಿಕ ನಂಬಿಕೆ ಹಾಗೂ ಪಂಗಡದ ಸ್ವಾಯತ್ತತೆಯ ವ್ಯಾಪ್ತಿಗೆ ಸೇರಿದ್ದು, ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಯನ್ನು ಮೀರುತ್ತದೆ ಎಂದು ಕೇಂದ್ರ ವಾದಿಸಿದೆ. ಮುಟ್ಟಿನ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವನ್ನು ಮುಂದುವರಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರವು ಆಗ್ರಹಿಸಿದೆ.

ಧಾರ್ಮಿಕ ಆಚರಣೆಗಳನ್ನು “ವೈಚಾರಿಕತೆ”, “ಆಧುನಿಕತೆ” ಅಥವಾ “ವೈಜ್ಞಾನಿಕ ಮಾನದಂಡ”ಗಳ ಆಧಾರದ ಮೇಲೆ ನಿರ್ಧರಿಸಬಾರದು ಎಂದು ಕೇಂದ್ರ ಸರಕಾರ ಎಚ್ಚರಿಸಿದೆ. ಇಂತಹ ವಿಧಾನವು ನ್ಯಾಯಾಲಯಗಳನ್ನು ನಂಬಿಕೆಯ ವಿಷಯಗಳಲ್ಲಿ ತಾತ್ವಿಕ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಗೆ ತಳ್ಳಬಹುದು ಎಂದು ಹೇಳಿದೆ.

ಶಬರಿಮಲೆ ವಿಚಾರಣೆ ಸುಪ್ರೀಂಕೋರ್ಟ್ ನ ಅತೀ ದೊಡ್ಡ ಪೀಠದಲ್ಲಿ ಪ್ರಾರಂಭವಾಗಿದ್ದು, ಏಪ್ರಿಲ್ 7 ರಿಂದ 9 ರವರೆಗೆ ಮರುಪರಿಶೀಲನೆಯನ್ನು ಬೆಂಬಲಿಸುವವರ (ಸಂಪ್ರದಾಯವಾದಿಗಳ) ವಾದ ಆಲಿಕೆ ನಡೆಯಲಿದೆ. ತದನಂತರ ಏಪ್ರಿಲ್ 14 ರಿಂದ 16 ರವರೆಗೆ 2018ರ ತೀರ್ಪನ್ನು ಬೆಂಬಲಿಸುವವರ ವಾದ ಆಲಿಕೆ ನಡೆಯಲಿದ್ದು, ಏಪ್ರಿಲ್ 22ರ ಸುಮಾರಿಗೆ ವಿಚಾರಣೆ ಪೂರ್ಣಗೊಂಡು ತೀರ್ಪು ಕಾಯ್ದಿರಿಸುವ ಸಾಧ್ಯತೆಯಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search