• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

Tulunadu News Posted On May 12, 2026
0


0
Shares
  • Share On Facebook
  • Tweet It

ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಮರೆತು ಬಿಟ್ಟಿದ್ದ ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಮಂಗಳೂರು ಪೂರ್ವ (ಕದ್ರಿ) ಠಾಣೆಯ ಪೊಲೀಸರು ಮತ್ತು ಆಟೋ ಚಾಲಕನ ಪ್ರಾಮಾಣಿಕತೆಯಿಂದ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ. ಮಂಗಳೂರು ಪ್ರವಾಸ ಮಾರ್ಗದರ್ಶಿಮಲ್ಲಿಕಟ್ಟೆ ನಿವಾಸಿ ಶ್ರೀಮತಿ ಲೋಲಿಟ್ಟ ಹಾಗೂ ಅವರ ಕುಟುಂಬದವರು ಮಲ್ಲಿಕಟ್ಟೆಯಿಂದ ಮೇರಿ ಹಿಲ್ ಕಡೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸಿದ್ದರು. ಈ ಸಂದರ್ಭದಲ್ಲಿ ಚಿನ್ನಾಭರಣಗಳಿದ್ದ ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಅವರು ಆಟೋದಲ್ಲಿಯೇ ಮರೆತು ಇಳಿದಿದ್ದರು. ಬ್ಯಾಗ್ ನಾಪತ್ತೆಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಗಾಬರಿಗೊಂಡ ಕುಟುಂಬದವರು ತಕ್ಷಣ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಆಟೋ ರಿಕ್ಷಾವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಆಟೋ ಚಾಲಕ ರೋಷನ್ ಅವರು ಕೂಡ ಬ್ಯಾಗ್ ಸಿಕ್ಕ ತಕ್ಷಣ ಪ್ರಾಮಾಣಿಕತೆ ಮೆರೆದು ಪೊಲೀಸರಿಗೆ ಸಹಕರಿಸಿದರು. ಆಟೋ ಚಾಲಕನ ಸಹಕಾರದಿಂದ ಪತ್ತೆಯಾದ ಬ್ಯಾಗ್‌ನಲ್ಲಿದ್ದ ₹25 ಲಕ್ಷ ಮೌಲ್ಯದ ಆಭರಣಗಳನ್ನು ಮಂಗಳೂರು ಪೂರ್ವ ಪೊಲೀಸ್ ಉಪನಿರೀಕ್ಷಕರ ಸಮ್ಮುಖದಲ್ಲಿ ಲೋಲಿಟ್ಟ ಅವರಿಗೆ ಹಸ್ತಾಂತರಿಸಲಾಯಿತು. ಪೊಲೀಸರ ತ್ವರಿತ ಸ್ಪಂದನೆ ಮತ್ತು ಚಾಲಕ ರೋಷನ್ ಅವರ ಪ್ರಾಮಾಣಿಕತೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search