• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

Tulunadu News Posted On June 26, 2026
0


0
Shares
  • Share On Facebook
  • Tweet It

ಜೂನ್ 26: ಉಡುಪಿ: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರಿಗೆ 3 ವರ್ಷಗಳ ಸಾದಾ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿರುವ ಅಪರೂಪದ ಪ್ರಕರಣ ಉಡುಪಿಯಲ್ಲಿ ನಡೆದಿದೆ.

ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ ಸಿ.ಸಿ. ನಂ 76/2023 ರಂತೆ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ವೈಗರ್ ಅಪಾರ್ಟಮೆಂಟ್ ನ ಮನೆ ಸಂಖ್ಯೆ 304 ಅನ್ನು ದಾವೆದಾರರ ಹೆಸರಿಗೆ ನೋಂದಣೆ ಮಾಡಿಕೊಡಬೇಕು ಅಥವಾ ಪರ್ಯಾಯವಾಗಿ ರೂ 27.20 ಲಕ್ಷ ಮೊತ್ತವನ್ನು ವಾರ್ಷಿಕ ಶೇ.9 ಬಡ್ಡಿದರದೊಂದಿಗೆ ಪಾವತಿಸಬೇಕು ಎಂದು ಆದೇಶಿಸಿತ್ತು.
ಆದರೆ ಆಯೋಗದ ಆದೇಶವನ್ನು ಅಮೃತ್ ಶೆಣೈ ಪಾಲಿಸದ ಹಿನ್ನಲೆಯಲ್ಲಿ ಸಂತೋಷ್ ಪೈ ಅವರು ಎಕ್ಸಿಕ್ಯೂಷನ್ ಕೇಸ್ ನಂ 31/2024 ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಅಮೃತ್ ಶೆಣೈ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದು ಧೃಢಪಟ್ಟ ಹಿನ್ನಲೆಯಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ – 2019 ರ ಸೆಕ್ಷನ್ 72 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಆಯೋಗ ಪರಿಗಣಿಸಿತು.

ಈ ಹಿನ್ನಲೆಯಲ್ಲಿ ಜೂನ್ 24 ರಂದು ತೀರ್ಪು ನೀಡಿದ ಆಯೋಗವು ಅಮೃತ್ ಶೆಣೈ ಅವರಿಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ , 1 ಲಕ್ಷ ರೂ ದಂಡ ಹಾಗೂ ದಂಡ ಪಾವತಿಸಲು ವಿಫಲವಾದ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ ಆರೋಪಿಯನ್ನು ಆಯೋಗದ ಮುಂದೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ಅದರಂತೆ ಜೂನ್ 25 ರಂದು ಅಮೃತ್ ಶೆಣೈ ಅವರನ್ನು ಆಯೋಗದ ಮುಂದೆ ಹಾಜರುಪಡಿಸಲಾಗಿದ್ದು, ಆಯೋಗವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಳಿಕ ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ರವಾನಿಸಲಾಗಿದೆ.
ಗ್ರಾಹಕ ಆಯೋಗದ ಆದೇಶವನ್ನು ಪಾಲಿಸದ ಹಿನ್ನಲೆಯಲ್ಲಿ ಜೈಲು ಶಿಕ್ಷೆ ವಿಧಿಸಿರುವ ಈ ಪ್ರಕರಣವು ಜಿಲ್ಲೆಯಲ್ಲಿ ಗಮನಾರ್ಹ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search