ವಿಧಾನಸೌಧಕ್ಕೆ ಕೆಮಿಕಲ್ ಬಾಂಬ್ ಸ್ಫೋಟದ ಬೆದರಿಕೆ
Posted On September 11, 2017
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ರಾಸಾಯನಿಕ್ ಬಾಂಬ್ ಇಟ್ಟಿರುವುದಾಗಿ ವಿಧಾನಸೌಧ ಪೊಲೀಸ್ ಠಾಣೆಗೆ ಬೆದರಿಕೆ ಕರೆ ಬಂದಿದೆ. ನಾಗರಾಜ್ ಎಂಬುವವರ ಹೆಸರಿನಲ್ಲಿ ಕರೆ ಬಂದಿದ್ದರಿಂದ ವಿಧಾನಸೌಧದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ.
ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ಘೋಷಿಸಿದ್ದು, ಬಾಂಬ್ ನಿಷ್ಕ್ರಿಯ ದಳ, ಶ್ವಾಾನದಳದಿಂದ ವಿಧಾನಸೌಧದಲ್ಲಿ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ. ವಿಶೇಷವಾಗಿ ವಿಧಾನಸೌದದ ಮೂರನೇ ಮಹಡಿಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕರೆ ಮಾಡಿದ್ದ ನಾಗರಾಜ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದೆಹಲಿಯಲ್ಲಿ ಉಗ್ರರು ಕೆಮಿಕಲ್ ಬಾಂಬ್ ದಾಳಿ ನಡೆಸಬಹುದು ಎಂದು ಇತ್ತೀಚೆಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಇದರಿಂದ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
- Advertisement -
Leave A Reply