ಭಾರತ ರತ್ನ ಪ್ರಶಸ್ತಿಗಾಗಿ ಸಿದ್ಧಗಂಗಾ ಶ್ರೀ ಹೇಳಿಕೆ ನೀಡಿದ್ದಾರೆ: ಮಹಾದೇವಿ
Posted On September 13, 2017
0

ಬಾಗಲಕೋಟೆ: ಸಿದ್ಧಗಂಗಾ ಶ್ರೀಗಳು ಭಾರತ ರತ್ನ ಪ್ರಶಸ್ತಿಗಾಗಿ ವೀರಶೈವ ಲಿಂಗಾಯತ ಒಂದೇ ಎಂದು ಹೇಳಿದ್ದಾರೆ. ಕೆಲವು ರಾಜಕಾರಣಿಗಳು ಭಾರತ ರತ್ನ ಕೊಡಿಸುವ ವಾಗ್ದಾನ ನೀಡಿದ್ದಾರೆ. ಅದಕ್ಕಾಗಿ ಈ ರೀತಿಯ ಹೇಳಿ ನೀಡಿದ್ದಾರೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಹಾದೇವಿ, ವೀರಶೈವ ಮಹಾಸಭಾದವರು ಸಿದ್ಧಗಂಗಾ ಶಿವಕುಮಾರ ಶ್ರೀಗಳ ಮೇಲೆ ಒತ್ತಡ ಹೇರುವ ಮೂಲಕ ವೀರಶೈವ ಲಿಂಗಾಯತ ಒಂದೇ ಎಂದು ಹೇಳಿದ್ದಾರೆ. ಶ್ರೀಗಳು ಏನೇ ಹೇಳಿದರೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಶ್ರೀಗಳಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ. ಅದಕ್ಕಾಗಿ ಈ ರೀತಿಯ ಹೇಳಿಕೆ ಹೇಳುತ್ತಿದ್ದಾರೆ. ಇನ್ನು ಕೆಲವರು ಅವರಿಂದ ಇಂತಹ ಹೇಳಿಕೆಯನ್ನು ಪ್ರಕಟಿಸಿದ್ದಾರೆ. ಈ ಕುರಿತು ಶೀಘ್ರದಲ್ಲಿ ಎಲ್ಲ ವಿವರಗಳನ್ನು ತಿಳಿಸುವುದಾಗಿ ಹೇಳಿದರು.
- Advertisement -