ಅಂಗಡಿ ತೆರವು: ಭಟ್ಕಳದಲ್ಲಿ ಮಾಲೀಕನಿಂದ ಆತ್ಮಹತ್ಯೆಗೆ ಯತ್ನ
Posted On September 14, 2017
ಭಟ್ಕಳ: ಪಟ್ಟಣದ ಪುರಸಭೆ ಅಂಗಡಿಗಳ ತೆರವು ಕಾರ್ಯಾಚರಣೆ ಖಂಡಿಸಿ ಅಂಗಡಿ ಮಾಲೀಕರೊಬ್ಬ ಸೀಮೆಎಣ್ಣೆ ಸುರಿದುಕೊಂಡು ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾಾರೆ. ರಾಮಚಂದ್ರ ನಾಯ್ಕ್ ಆತ್ಮಹತ್ಯೆ ಯತ್ನಸಿದವರು ಎಂದು ತಿಳಿದುಬಂದಿದೆ. ಬೆಳಗ್ಗೆ 6.40ರ ಸುಮಾರಿಗೆ ತೆರವುಗೊಳಿಸಲು ಪುರಸಭೆ ಅಧಿಕಾರಿಗಳು ಕಾರ್ಯಪ್ರವೃತ್ತರಾದಾಗ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರನ್ನು ರಕ್ಷಿಸಲು ಹೋದ ಈಶ್ವರ ನಾಯ್ಕ್ ಅವರಿಗೂ ಬೆಂಕಿ ತಗುಲಿ ಗಾಯಗಳಾಗಿವೆ. ಇಬ್ಬರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ನಗರ ಬಂದ್‌ಗೆ ಕರೆ ನೀಡಲಾಗಿದೆ. ಭದ್ರತಾ ದೃಷ್ಟಿಯಿಂದ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
- Advertisement -
Trending Now
ನಳಿನ್ ಎಂಬ ಸ್ಥಿತಪ್ರಜ್ಞ ಪ್ರಚಾರಕನಿಂದ ಪ್ರಸ್ತುತದ ತನಕ ಹೇಗೆ ಸಾಧ್ಯ?
October 2, 2024
ರಸ್ತೆ ಸುರಕ್ಷತೆ ಮತ್ತು ಸೈಬರ್ ಅಪರಾಧದ ಕುರಿತು ಜಾಗೃತಿ -ಅನುಪಮ್ ಅಗರ್ವಾಲ್
September 27, 2024
Leave A Reply