ರಾಹುಲ್ ಹೇಳಿಕೆ ನಾಚಿಕೆಗೇಡು: ಅರುಣ್ ಜೇಟ್ಲಿ
Posted On September 15, 2017

ದೆಹಲಿ: ಕುಟುಂಬ ರಾಜಕಾರಣದ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ ಹೇಳಿಕೆ ನಾಚಿಗೇಡು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು ‘ಭಾರತದಲ್ಲಿ ನಿಜವಾದ ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಸಂದರ್ಭ ಈಗ ಬಂದಿದೆ. ಈಗೇನಿದ್ದರೂ ನಾಯಕರನ್ನು ಯೋಗ್ಯತೆಯ ಆಧಾರದ ಮೇಲೆ ಆರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಭಾರತ ಜಾಗತಿಕ ಮಟ್ಟದಲ್ಲಿ ನಾಯಕರನ್ನು ಸೃಷ್ಟಿಸಿದೆ. ನಮ್ಮ ಎಷ್ಟೋ ಎಂಜಿನಿಯರ್‌ಗಳು, ವಿಜ್ಞಾನಿಗಳು, ಸಂಶೋಧಕರು, ವೈದ್ಯರು ಇದಕ್ಕೆ ನಿದರ್ಶನವಾಗಿದ್ದಾರೆ. ಕುಟುಂಬ ರಾಜಕಾರಣ ಮೇಲೆ ಭಾರತ ನಿಂತಿದೆ ಎಂದು ಹೇಳುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ’ ಎಂದು ಹೇಳಿದ್ದಾರೆ. ಅಮೆರಿಕದ ವಿವಿಯೊಂದರಲ್ಲಿ ಮಾತನಾಡಿದ್ದ ರಾಹುಲ್ ‘ಕುಟುಂಬ ರಾಜಕಾರಣಕ್ಕೆ ಭಾರತ ಹೊಂದಿಕೊಂಡಿದೆ’ ಎಂಬರ್ಥದಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ಟೀಕೆಗೆ ಗ್ರಾಾಸವಾಗಿತ್ತು.
- Advertisement -
Leave A Reply