• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೆಸಾರ್ಟ್ ಮೋಜಿನಲ್ಲಿರುವ 18 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

TNN Correspondent Posted On September 18, 2017
0


0
Shares
  • Share On Facebook
  • Tweet It

ಚೆನ್ನೈ : ಎಐಎಡಿಎಂಕೆ ಮಾಜಿ ಉಪ ಪ್ರಧಾನಕಾರ್ಯದರ್ಶಿ ಹಾಗೂ ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ಬಣದಲ್ಲಿ ಗುರುತಿಸಿಕೊಂಡು ತಮಿಳುನಾಡು ಸಿಎಂ ಇ.ಪಳನಿಸಾಮಿ ಬಹುಮತ ಸಾಬೀತಿಗೆ ರಾಜಕೀಯ ಚದುರಂಗದ ದಾಳಗಳಾಗಿ ಮಡಿಕೇರಿಯ ರೆಸಾರ್ಟ್‍ಗಳಲ್ಲಿ ಮೋಜು-ಮಸ್ತಿಯಲ್ಲಿದ್ದ 18 ಶಾಸಕರನ್ನು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಳನಿಸಾಮಿ ಮತ್ತು ಪನ್ನೀರ್ ಸೆಲ್ವಂ ಬಣಗಳು ಒಂದಾಗಿ ಸರ್ಕಾರ ರಚಿಸಿದ ನಂತರ ಬಹುಮತದ ಸಂಖ್ಯಾಬಲ ದಕ್ಕಬಾರದೆಂದು ದಿನಕರನ್ ಈ ಶಾಸಕರನ್ನು ರೆಸಾರ್ಟ್ ವಾಸದಲ್ಲಿ ಇರಿಸಿದ್ದರು. ಶುಕ್ರವಾರದೊಳಗೆ ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸಿ ತವರು ಕ್ಷೇತ್ರಗಳಿಗೆ ಮರಳುವಂತೆ ಕಳೆದ ವಾರ ಸ್ಪೀಕರ್ ಸೂಚಿಸಿದ್ದರು. ಈ ಮಾತನ್ನು ಮೀರಿಯೂ ಮಜಾ ಉಡಾಯಿಸುತ್ತಿದ್ದ ಶಾಸಕರು ಈಗ ಅನರ್ಹರಾಗಿದ್ದಾರೆ. ಶಾಸಕರು ಪ್ರಜಾಪ್ರಭುತ್ವದ ಲೇವಡಿ ಮಾಡುತ್ತಿದ್ದಾರೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ರಾಜಕೀಯದ ಬಗ್ಗೆ ಜನರಲ್ಲಿ ಹೇಸಿಗೆ ಮೂಡಿತ್ತು.

ಸಿಎಂ ಪಳನಿಸಾಮಿ ವಿಶ್ವಾಸಮತ ಯಾಚನೆಗೆ ಮುಂದಾಗಬೇಕೆ ಬೇಡವೇ ಎಂದು ಮದ್ರಾಸ್ ಹೈಕೋರ್ಟ್ ಇನ್ನೂ ನಿರ್ಧರಿಸಬೇಕಿದೆ.

ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಮತ್ತು ದಿನಕರನ್ ಬೆಂಬಲಿತ ಶಾಸಕರೊಂದಿಗೆ ಕೆಲ ವಾರಗಳ ಹಿಂದೆ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಭೇಟಿ ಮಾಡಿ ಸಿಎಂ ಪಳನಿಗೆ ವಿಶ್ವಾಸಮತ ಸಾಬೀತಿಗೆ ಸೂಚಿಸುವಂತೆ ಮನವಿ ಸಲ್ಲಿಸಿದ್ದರು.

0
Shares
  • Share On Facebook
  • Tweet It


aiadmkdhanpaldinakarangovernormlasasikalaspeakertamilnaduttvvidyasagar


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!
October 5, 2017
ಜಯಾ ಸಾವಿನ ಮಹಾರಹಸ್ಯ ಸ್ಫೋಟ!
September 24, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search