ಸೇನಾ ನೆಲೆ ಮೇಲೆ ದಾಳಿ ಮಾಡಿದ್ದ ಉಗ್ರನ ಬಂಧನ
ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮಿರದ ಬನಿಹಾಲ್ ನ ಸಶಸ್ತ್ರ ಸೀಮಾ ಬಲದ ಸೇನಾ ನೆಲೆ ಮಾಡಿದ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಉಗ್ರನನ್ನು ಬಂಧಿಸಿದ್ದಾರೆ.
ಬಂಧಿತ ಉಗ್ರನನ್ನು ಆಖಿಫ್ ಎಂದು ಗುರುತಿಸಲಾಗಿದ್ದು, ಕಸ್ಕೂತ್ ಪ್ರದೇಶದ ಈತ ಖನ್ನಾಬಲ್ ಪದವಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ ಬುದ್ಧವಾರ ಭಾರತದ ಸೇನಾ ನೆಲೆ ಮೇಲೆ ಮೂವರು ಉಗ್ರರು ಮಾಡಿದ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು ಗಜಾನ್ಫರ್ ಅಹಮ್ಮದ್ ಹಾಗೂ ಆರಿಫ್ ಎಂಬ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಇವರಿಬ್ಬರೂ ಲಷ್ಕರೆ ತಯ್ಯಬಾ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬಂಧಿಸಲಾದ ಉಗ್ರ ಯಾವ ಸಂಘಟನೆಗೆ ಸೇರಿದವ ಎಂದು ತಿಳಿದುಬಂದಿಲ್ಲ. ಈತನಿಂದ ಚೀನಾದ ಒಂದು ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಈ ಮೂವರು ಉಗ್ರರು ಹಲವು ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದಲ್ಲದೇ, ಭಾರತೀಯ ಸೇನಾ ನೆಲೆಗಳಿಗೆ ನುಗ್ಗಿ ಶಸ್ತ್ರಾಸ್ತ್ರ ಖದಿಯುವುದರಲ್ಲಿ ನಿರತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Leave A Reply