ಕೆಂಪು ಕೋಟೆ ಆವರಣದಲ್ಲಿ ದಸರಾ ಆಚರಣೆ: ನರೇಂದ್ರ ಮೋದಿ ಭಾಗಿ
Posted On September 30, 2017

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದಸರಾ ಆಚರಿಸಲು ತೀರ್ಮಾನಿಸಿದ್ದು, ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆಯುವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.
ಇದಕ್ಕೂ ಮೊದಲು ಟ್ವಿಟರ್ ಮೂಲಕ ಮೋದಿ ಅವರು ‘ದೇಶದ ಎಲ್ಲ ಜನರಿಗೂ ವಿಜಯ ದಶಮಿಯ ಶುಭಾಶಯಗಳು’ ಎಂದು ಶುಭಕೋರಿದ್ದಾರೆ.
ಮೋದಿ ಪ್ರಧಾನಿಯಾದ ಬಳಿಕ ಎರಡನೇ ಬಾರಿ ದೆಹಲಿಯಲ್ಲಿ ದಸರಾ ಆಚರಣೆ ಮಾಡುತ್ತಿದ್ದಾರೆ. 2015ರಲ್ಲಿ ಆಂಧ್ರಪ್ರದೇಶದ ಅಮರಾವತಿ ಹಾಗೂ 2016ರಲ್ಲಿ ಉತ್ತರ ಪ್ರದೇಶದ ಲಖನೌನಲ್ಲಿ ನರೇಂದ್ರ ಮೋದಿ ಅವರು ದಸರಾ ಆಚರಿಸಿದ್ದರು.
ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಹ ದಸರಾ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
- Advertisement -
Trending Now
“ನಾನು ಪಾಳೇಗಾರ ಅಲ್ಲ, ಕ್ಷೇತ್ರದ ಕಾವಲುಗಾರ!“ -ವೇದವ್ಯಾಸ ಕಾಮತ್ ಕಿಡಿ
February 17, 2025
Leave A Reply