• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಯೋಧರಿಗೆ ಸಿಹಿ ಹಂಚಿ ಮೋದಿ ದೀಪಾವಳಿ ಆಚರಣೆ

TNN Correspondent Posted On October 19, 2017
0


0
Shares
  • Share On Facebook
  • Tweet It

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇರುವ ಗೂರೆಜ್ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದರು. ಯೋಧರಿಗೆ ಸಿಹಿ ಹಂಚಿ ಯೋಧರೊಂದಿಗೆ ಸುಮಾರು ಎರಡು ಗಂಟೆ ಸಂಭ್ರಮದಿಂದ ಬೆರೆತರು. ಯೋಧರ ಬಟ್ಟೆ ಧರಿಸಿ ಗಮನ ಸೆಳೆದ ಮೋದಿ, ಯೋಧರಿಗೆ  ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.

‘ಯೋಧರೊಂದಿಗೆ ಬೆರೆಯುವ ಮೂಲಕ ನಾನು ಪ್ರತಿ ಭಾರಿ ಹೊಸ ಸ್ಫೂರ್ತಿ ಪಡೆಯುತ್ತೇನೆ. ಸೈನಿಕರೊಂದಿಗೆ ಹಬ್ಬ ಆಚರಿಸುವುದೇ ಹೆಮ್ಮೆ. ಸಂದಿಗ್ಧ ಸ್ಥಿತಿಯಲ್ಲೂ ದೇಶಕ್ಕಾಗಿ ಹೋರಾಡುವ ಯೋಧರ ಕೆಚ್ಚು ಮತ್ತು ಸಾಹಸ, ತ್ಯಾಗ ಸ್ಮರಣೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಾಯಿ ಭಾರತ ಮಾತೆಯನ್ನು ರಕ್ಷಿಸುವ ಮಹತ್ತರ ಹೊಣೆಗಾರಿಕೆಯನ್ನು ಯೋಧರು ನಿಭಾಯಿಸುತ್ತಿದ್ದಾರೆ. ಅವರೊಂದಿಗೆ ಹಬ್ಬ ಆಚರಿಸುತ್ತಿರುವುದು ಸಂತಸ ಮೂಡಿಸಿದೆ. ದೇಶಕಾಯುವವರಿಗೆ ಕೇಂದ್ರ ಸರಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ. ಒನ್ ರ್ಯಾಂಕ್ ಒನ್ ಪೆನ್ಶನ್ ಯೋಜನೆ ಜಾರಿ ಮಾಡಲಾಗುವುದು ಎಂದು ಹೇಳಿದರು.

ಮೋದಿಗೆ ಸೇನಾ ಮುಖ್ಯಸ್ಥ ಬಿಫಿನ್ ರಾವತ್, ಸೇರಿ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search