ಅ.29ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
Posted On October 20, 2017

ಮಂಗಳೂರು: ಇದೇ ಅಕ್ಟೋಬರ್ 29ರಂದು ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸುವ ಮೋದಿ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲಿರುವ ಮೋದಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಡಾ.ವೀರೇಂದ್ರ ಹೆಗ್ಗಡೆಯವರು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏರ್ಪಡಿಸುವ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜತೆಗೆ ಧರ್ಮಸ್ಥಳದ ಗ್ರಾಮಾಭಿವೃದ್ಧಿಯ ಯೋಜನೆಯ ಸಮಾರಂಭದಲ್ಲೂ ಮೋದಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಹ ಭಾಗವಹಿಸಿದ್ದರು.
- Advertisement -
Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
February 3, 2023
Leave A Reply