ಉತ್ತರಪ್ರದೇಶದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ
Posted On October 21, 2017

ಗಾಜೀಪುರ: ಪತ್ರಕರ್ತ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರಾಜೇಶ ಮಿಶ್ರಾ(35) ಅವರನ್ನು ದುಷ್ಕರ್ಮಿಗಳು ಉತ್ತರ ಪ್ರದೇಶದ ಗಾಜೀಪುರದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಬೈಕ್ ನಲ್ಲಿ ಬಂದ ಹಂತಕರು ಕರಂದಾ ಪ್ರದೇಶದಲ್ಲಿರುವ ಸಹೋದರ ಅಮಿತೇಶ ಮಿಶ್ರಾ ಅಂಗಡಿಯಲ್ಲಿ ಕುಳಿತಿದ್ದಾಗ ರಾಜೇಶ ಮೇಲೆ ದಾಳಿ ಮಾಡಿದ್ದಾರೆ. ರಾಜೇಶ ಮಿಶ್ರಾರನ್ನು ಆಸ್ಪತ್ರೆಗೆ ದಾಖಲಿಸಿದ್ದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಹೋದರ ಅಮಿತೇಶ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಶ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದು, ಹಿಂದಿ ದಿನಪತ್ರಿಕೆ ದೈನಿಕ ಜಾಗರಣ ಪತ್ರಿಕೆಯ ಸ್ಥಳೀಯ ವರದಿಗಾರರಾಗಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿ ‘ರಾಜೇಶ ಆರ್ ಎಸ್ ಎಸ್ ಸಕ್ರೀಯ ಕಾರ್ಯಕರ್ತರಾಗಿದ್ದರು. ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
- Advertisement -
Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
January 26, 2023
Leave A Reply