ಮೀನಿನ ಖಾದ್ಯ ಸೇವಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿದಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ
Posted On October 23, 2017

ಮೀನಿನ ಖಾದ್ಯ ತಿಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಹಿಂದೂ ಧರ್ಮಕ್ಕೆ ಮತ್ತು ಶ್ರೀ ಕ್ಷೇತ್ರಕ್ಕೆ ಅಪಮಾನವೇಸಗಿದ್ದಾರೆ.
ಭಾನುವಾರ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನದ ವೇಳೆಗೆ ಬಂಟ್ವಾಳದಲ್ಲಿ ಕಾರ್ಯಕ್ರಮ ಮುಗಿಸಿ, ಬಂಟ್ವಾಳ ಐಬಿಯಲ್ಲಿ ಕರಾವಳಿ ಖಾದ್ಯ ಮೀನನ್ನು ಸೇವಿಸಿದ್ದರು. ಆ ಬಳಿಕ ಸಿಎಂ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು. ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್ ಅವರು ಮಂಜುನಾಥನ ದರ್ಶನ ಪಡೆದಿದ್ದರು. ಹಿಂದೂ ದೇವಾಲಯಗಳಲ್ಲಿ ಅದರದ್ದೇ ಆದ ನಿಯಮ ನಿಷ್ಟೆಗಳಿರುತ್ತದೆ, ಅಲ್ಲದೆ ಭಕ್ತಾದಿಗಳು ಮಾಂಸಾಹಾರವನ್ನು ಸೇವಿಸಿ ದೇವಸ್ಥಾನವನ್ನು ಪ್ರವೇಶಿಸುವುದಿಲ್ಲ ಅಂ ತಹುದರಲ್ಲಿ ಲಕ್ಷಂತಾರ ಭಕ್ತಾದಿಗಳನ್ನು ಹೊಂದಿರುವ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಾಸ್ತಳಕ್ಕೆ ಭೇಟಿ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
- Advertisement -
Leave A Reply