• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ- ಭದ್ರತಾ ದೃಷ್ಟಿಯಿಂದ ಭಾನುವಾರ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ!

Tulunadu News Posted On October 26, 2017
0


0
Shares
  • Share On Facebook
  • Tweet It

ಪ್ರಧಾನಿಯಾದ ಬಳಿಕ ಮೋದಿ ಅವರು ಭಾನುವಾರ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.  ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಕ್ಟೋಬರ್ 28ರ ಶನಿವಾರದಿಂದ, ಅಕ್ಟೋಬರ್ 29ರವರೆಗೆ ಭಕ್ತಾದಿಗಳಿಗೆ ಮಂಜುನಾಥ ಸ್ವಾಮಿಯ ದರ್ಶನ ಸಾಧ್ಯವಿಲ್ಲ.

ಭದ್ರತೆಯ ದೃಷ್ಟಿಯಿಂದ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ಕ್ಷೇತ್ರದ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ  ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 29ರಂದು ಬೆಳಿಗ್ಗೆ 11.30ಕ್ಕೆ ಮೋದಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಉಜಿರೆಗೆ ತೆರಳಲಿರುವ ಮೋದಿ ಎಸ್‍ಡಿಎಂ ಮೈದಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.

ಮೋದಿ ಪ್ರವಾಸ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹತ್ತು ಎಸ್‍ಪಿ ಶ್ರೇಣಿಯ ಅಧಿಕಾರಿಗಳು, ಡಿವೈಎಸ್‍ಪಿ, ಇನ್ಸ್‍ಪೆಕ್ಟರ್, ಪಿಎಸ್‍ಐ ಸೇರಿದಂತೆ 150 ಮಂದಿ ಅಧಿಕಾರಿಗಳು, ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ನಕ್ಸಲ್ ಚಟುವಟಿಕೆ ಇರೋ ಧರ್ಮಸ್ಥಳ, ಬೆಳ್ತಂಗಡಿ ಪರಿಸರದ ದಟ್ಟ ಕಾಡಲ್ಲಿ ನಕ್ಸಲ್ ನಿಗ್ರಹ ದಳದ 25 ತಂಡಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search