ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ
Posted On October 30, 2017

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ನೈಸರ್ಗಿಕ ಸಂಪತ್ತು ಹೊಂದಿರುವ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೂಲ ಸೌಕರ್ಯ ಒದಗಿಸುವುದು, ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಸೆಳೆಯಲು ಹಾಗೂ ಜನರ ನಂಬಿಕೆ ಉಳಿಸಲು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಸೇರಿ ನಾನಾ ಅಂಶಗಳಿಗೆ ಒತ್ತು ಕೊಟ್ಟಿರುವ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದೆ.
ಶಿಮ್ಲಾದಲ್ಲಿ ನಡೆದ ಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ನವೆಂಬರ್ 9ರಂದು ಚುನಾವಣೆ ನಡೆಯಲಿದೆ.
ಆದಾಗ್ಯೂ ಇನ್ನೂ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಪಕ್ಷದ ಮುಖ್ಯಮಂತ್ರಿಯನ್ನು ಘೋಷಣೆ ಮಾಡಿಲ್ಲ. ಮೂರು ದಶಕಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಸಿಎಂ ಅಭ್ಯರ್ಥಿ ಹೆಸರು ಘೋಷಿಸದೆ ಚುನಾವಣೆ ನಡೆಸುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿಗಳ ಆದಿಯಲ್ಲಿ ಜೆ.ಪಿ.ನಡ್ಡಾ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.
- Advertisement -
Leave A Reply