ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ
Posted On November 1, 2017

ದೆಹಲಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ, ಕನ್ನಡ ಉಳಿಸುವ ಕುರಿತು ಸಂದೇಶಗಳ ಮಹಾಪೂರವೇ ಹರಿದು ಬರುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ಕೋರಿದ್ದಾರೆ. ಅದೂ ಅಚ್ಚಕನ್ನಡದಲ್ಲಿ.
ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ನರೇಂದ್ರ ಮೋದಿ ಅವರು ಕರ್ನಾಟಕದ ಧರ್ಮಸ್ಥಳ, ಬೀದರ್, ಬೆಂಗಳೂರಿಗೆ ಭೇಟಿ ನೀಡಿದ್ದರು.
- Advertisement -
Trending Now
ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ
March 15, 2025
ಮಲ್ಟಿಪ್ಲೆಕ್ಸ್ ಟಿಕೆಟ್ ದರ ಗರಿಷ್ಟ 200 ರೂಗೆ ಫಿಕ್ಸ್ ಯಾವಾಗ?
March 14, 2025
Leave A Reply