ಹಿಂದೂಸ್ತಾನದ 8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು!
ಭಾರತದ ಹಲವು ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿದ್ದು, ಹಿಂದೂಗಳಿಗೂ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೇನೋ ಸಲ್ಲಿಕೆಯಾಗಿದ್ದು, ಹೀಗೆ ಹಿಂದೂಗಳು ಅಲ್ಪಸಂಖ್ಯಾತರಾಗಲು ಕಾರಣ ಏನು ಎಂಬುದು ಪ್ರಶ್ನೆಯಾಗಿದೆ.
2011ರ ಜನಗಣತಿ ಪ್ರಕಾರ ಲಕ್ಷದ್ವೀಪದಲ್ಲಿ ಹಿಂದೂಗಳೂ ಶೇ.2.5ರಷ್ಟು, ಮಿಜೋರಾಂನಲ್ಲಿ ಶೇ.2.7, ನಾಗಾಲೆಂಡ್ ನಲ್ಲಿ ಶೇ.8.7, ಮೇಘಾಲಯದಲ್ಲಿ ಶೇ.11.3, ಜಮ್ಮು-ಕಾಶ್ಮೀರದಲ್ಲಿ ಶೇ.28.44, ಅರುಣಾಚಲ ಪ್ರದೇಶದಲ್ಲಿ ಶೇ.29, ಮಣಿಪುರದಲ್ಲಿ ಶೇ.31 ಹಾಗೂ ಪಂಜಾಬಿನಲ್ಲಿ ಶೇ.38ರಷ್ಟು ಹಿಂದೂಗಳಿದ್ದಾರೆ ಎಂದು ಪಿಐಎಲ್ ನಲ್ಲಿ ಉಲ್ಲೇಖಿಸಲಾಗಿದೆ.
ಹೀಗೆ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ಅಲ್ಪಸಂಖ್ಯಾತರ ಮಾನ್ಯತೆ ನೀಡುವಂತೆ ದೆಹಲಿ ಮೂಲದ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಎಂಬುವವರು ಪಿಐಎಲ್ ಸಲ್ಲಿಸಿದ್ದು, ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆ ಸೆಕ್ಸನ್ 2 (ಸಿ) ಅನ್ವಯ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಆದರೆ, ಜಮ್ಮು-ಕಾಶ್ಮೀರ, ಅರುಣಾಚಲ ಪ್ರದೇಶದ ಸೇರಿ ಹಲವು ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಲು ಕಾರಣವೇನು? ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಿನ ಹಿಂಸೆಯಿಂದ ವಲಸೆ, ಮತಾಂತರ ಸೇರಿ ಹಲವು ಕಾರಣಗಳಿಂದ ಹಿಂದೂಗಳು ಅಲ್ಪಸಂಖ್ಯಾತರಾದರೆ? ಹೀಗೆ ಹಲವು ಪ್ರಶ್ನೆಗಳು ಏಳುವಂತೆ ಮಾಡಿದೆ.
Leave A Reply