ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ಮನೆ ದಾರಿ ತೋರಲು ನ.9 ಪ್ರಶಸ್ತ ದಿನ: ನರೇಂದ್ರ ಮೋದಿ
ಶಿಮ್ಲಾ: ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ಸಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನ ಮನೆ ದಾರಿ ತೋರಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಕಾಂಗ್ರಾದಲ್ಲಿ ಏರ್ಪಡಿಸಿದ್ದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಜ್ಯವನ್ನು ಅಭಿವೃದ್ಧಿಗೊಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್ ಏನೋ ಪ್ರಣಾಲಿಕೆಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇನೆ ಎಂದು ತಿಳಿಸಿದೆ. ಆದರೆ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ.
ಹಾಗಾಗಿ ರಾಜ್ಯದ ಜನರಿಗೆ ಲೂಟಿ ಮಾಡಿದವರಿಗೆ ಬೀಳ್ಕೊಡಲು ನವೆಂಬರ್ 9 ಪ್ರಶಸ್ತವಾದ ದಿನ ಎಂದು ತಿಳಿಸಿದ್ದಾರೆ.
2012ರಿಂದಲೂ ವೀರಭದ್ರಸಿಂಗ್ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ? ಆದರೆ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳಾವವು? ಅವರು ಕೇಂದ್ರ ಸಚಿವರಾದಾಗ ಗಳಿಸಿದ ಹಣಕ್ಕೂ, ಇದ್ದ ಆದಾಯಕ್ಕೂ ಲೆಕ್ಕವೇ ಸಿಗುತ್ತಿಲ್ಲ. ಈ ಕುರಿತು ಅವರ ವಿರುದ್ಧ ಪ್ರಕರಣ ಸಹ ದಾಖಲಾಗಿದೆ. ಇಂಥವರು ರಾಜ್ಯವನ್ನು ಅಭಿವೃದ್ಧಿಗೊಳಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನ.9ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, 18ರಂದು ಫಲಿತಾಂಶ ಪ್ರಕಟವಾಗಲಿದೆ.
Leave A Reply