ಈಗ ಚುನಾವಣೆ ನಡೆದರೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ: ಕಾಪ್ಸ್ ಸಮೀಕ್ಷೆ
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಮಿಷನ್ 150 ಗುರಿ ನಿಗದಿಪಡಿಸಿಕೊಂಡು ಯಶಸ್ವಿಯಾಗಿ ಪರಿವರ್ತನಾ ರ್ಯಾಲಿ ಕೈಗೊಂಡಿರುವ ಬೆನ್ನಲ್ಲೇ, ಚುನಾವಣಾ ಪೂರ್ವ ಸಮೀಕ್ಷೆಯೊಂದು ಬಹಿರಂಗವಾಗಿದ್ದು, ರಾಜ್ಯದಲ್ಲಿ ಈಗ ಚುನಾವಣೆ ನಡೆದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಸಮೀಕ್ಷೆಯಿಂದ ದೃಢವಾಗಿದೆ.
ಕಾಪ್ಸ್ ಎಂಬ ಸಂಸ್ಥೆ ರಾಜ್ಯಾದ್ಯಂತ ನಡೆಸಿದ ಸಮೀಕ್ಷೆಯಿಂದ ಬಿಜೆಪಿ ಈಗ ಚುನಾವಣೆ ಎದುರಿಸಿದರೂ 113 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುತ್ತದೆ ಎಂದು ಉಲ್ಲೇಖಿಸಲಾಗಿದೆ. ಇನ್ನು ಆಡಳಿತಾ ರೂಢ ಕಾಂಗ್ರೆಸ್ 85 ಹಾಗೂ ಜೆಡಿಎಸ್ ಕೇವಲ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ.
ಆದಾಗ್ಯೂ ಬಿಜೆಪಿ ನಾಯಕರು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸುತ್ತಿದ್ದು, ಕರಾವಳಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಅದರಲ್ಲೂ ಹೈದರಾಬಾದ್ ಕರ್ನಾಟಕ ಭಾಗದ 25 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಅಕ್ಟೋಬರ್ ಅಂತ್ಯದವರೆಗಿನ ಸಮೀಕ್ಷೆ ಇದಾಗಿದ್ದು, ರಾಜ್ಯದಲ್ಲಿ ಈಗಲೇ ಚುನಾವಣೆ ಘೋಷಣೆಯಾದರೆ ಯಾರನ್ನು ಗೆಲ್ಲಿಸಲು ಇಚ್ಛಿಸುತ್ತೀರಿ ಎಂಬ ಪ್ರಶ್ನೆಯೊಂದಿಗೆ ಸಂಸ್ಥೆ ಸಮೀಕ್ಷೆ ನಡೆಸಿತ್ತು.
Leave A Reply