ಕಾಶ್ಮೀರ ಮೇಲ್ಮನೆಯಲ್ಲೂ ಮೊಳಗಿತು ಬಿಜೆಪಿ ಝೇಂಕಾರ
Posted On November 13, 2017
0
ಶ್ರೀನಗರ: ರಾಜ್ಯಸಭೆಯಲ್ಲಿ ಬಿಜೆಪಿ ಹೆಚ್ಚಿನ ಸೀಟು ಹೊಂದಿದ ಖ್ಯಾತಿಯ ಬೆನ್ನಲ್ಲೇ ಜಮ್ಮು-ಕಾಶ್ಮೀರ ವಿಧಾನ ಪರಿಷತ್ ನಲ್ಲಿ ಹೆಚ್ಚು ಅಭ್ಯರ್ಥಿಗಳನ್ನು ಹೊಂದುವ ಮೂಲಕ ರಾಜ್ಯದ ಇತಿಹಾಸದಲ್ಲೇ ಬಿಜೆಪಿ ಮೊದಲ ಬಾರಿಗೆ ಮೇಲ್ಮನೆಯಲ್ಲಿ ಹೆಚ್ಚು ಸದಸ್ಯರನ್ನು ಹೊಂದಿದ ಹೆಗ್ಗಳಿಗೆಕೆ ಪಾತ್ರವಾಗಿದೆ.
ಹೌದು, ಇದುವರೆಗೆ ಜಮ್ಮು-ಕಾಶ್ಮೀರ ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಪಿಡಿಪಿ ತಲಾ 11 ಸದಸ್ಯರನ್ನು ಹೊಂದಿದ್ದವು. ಆದರೆ ಈಗ ಪಿಡಿಪಿಯ ಮೇಲ್ಮನೆ ಸದಸ್ಯ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದು, 11 ಸದಸ್ಯರೊಂದಿಗೆ ಬಿಜೆಪಿ ಮೇಲ್ಮನೆಯಲ್ಲಿ ಬೃಹತ್ ಪಕ್ಷವಾಗಿ ಹೊರಹೊಮ್ಮಿದೆ.
ಪ್ರಸ್ತುತ 33 ಸದಸ್ಯಬಲದ ವಿಧಾನ ಪರಿಷತ್ತಿನಲ್ಲಿ ಬಿಜೆಪಿ 11, ಪಿಡಿಪಿ 10, ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ತಲಾ 6 ಸ್ಥಾನ ಹೊಂದಿದೆ.
ಜಮ್ಮು-ಕಾಶ್ಮೀರದಲ್ಲಿ 2015ರಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯಸಭೆಯಲ್ಲೂ ಬಿಜೆಪಿ 61 ಸದಸ್ಯರೊಂದಿಗೆ ಮೊದಲ ಸ್ಥಾನದಲ್ಲಿದೆ.
Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
November 21, 2025









