ಭಾರತ ಪಾಕ್ ಆಕ್ರಮಿತ ಕಾಶ್ಮೀರ ವಶಪಡಿಸಿಕೊಳ್ಳಲು ಬಯಸಿದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ!
ದೆಹಲಿ: ಭಾರತ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ನೆರೆಯ ದೇಶದಿಂದ ಬಿಡಿಸಿಕೊಳ್ಳಲು ಯತ್ನಿಸಿದರೆ, ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಹಂಸರಾಜ್ ಆಹಿರ್ ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ನಮ್ಮ ದೇಶದ ಭಾಗವೇ ಆಗಿತ್ತು. ಆದರೆ, ಹಿಂದಿನ ಸರ್ಕಾರಗಳ ತಪ್ಪುಗಳಿಂದ ಪಾಕಿಸ್ತಾನ ಅದನ್ನು ವಶಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ಸಿಗೂ ಟೀಕಿಸಿದ್ದಾರೆ.
ಪಿಒಕೆ ಪಾಕಿಸ್ತಾನದ್ದು ಹಾಗೂ ಅದನ್ನು ಯಾರಿಗೂ ಬಿಟ್ಟುಕೊಡಲ್ಲ. ಭಾರತವೇನೋ ಅದನ್ನು ವಶಪಡಿಸಿಕೊಳ್ಳಲು ಬಯಸುತ್ತಿದೆ. ಆದರೆ ಪಾಕ್ ಅಕ್ರಮಿತ ಕಾಶ್ಮೀರ ಪ್ರದೇಶವನ್ನು ಬಿಟ್ಟುಕೊಡಲು ಪಾಕಿಸ್ತಾನವೇನೂ ಬಳೆ ತೊಟ್ಟಿಲ್ಲ. ಅವರ ಬಳಿ ಅಣ್ವಸ್ತ್ರ ಶಕ್ತಿ ಇದೆ ಎಂದು ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫೆರನ್ಸ್ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಪಾಕಿಸ್ತಾನದ ಪರ ಬ್ಯಾಟಿಂಗ್ ಮಾಡಿದ್ದರು.
ಈ ಹೇಳಿಕೆ ಹಿನ್ನೆಲೆಯಲ್ಲಿ ಬಿಹಾರ ಹೈಕೋರ್ಟ್ ಫಾರೂಕ್ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿತ್ತು.
Leave A Reply