ಜೆಎನ್ ಯು ವಿವಿ ಮುಸ್ಲಿಂ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಗೆ ಕಿರುಕುಳ; ಬಂಧನ
ದೆಹಲಿ: ಇದುವರೆಗೂ ದೇಶದ್ರೋಹ ಚಟುವಟಿಕೆಗಳಿಗೆ ಖ್ಯಾತಿಯಾಗಿದ್ದ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಈಗ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಸುದ್ದಿಯಾಗಿದ್ದು, ತರಗತಿ ಮುಗಿಸಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಹ್ನಾವಾಜ್ ಖಾನ್ (29) ಎಂಬಾತ ದ್ವಿತೀಯ ಬಿಎ ಓದುತ್ತಿದ್ದು, ತರಗತಿ ಮುಗಿಸಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಅಡ್ಡಹಾಕಿ, ಪ್ರೇಮಪ್ರಸ್ತಾಪ ಮಾಡಿದ್ದಾನೆ. ಆದರೆ 18 ವರ್ಷದ ವಿದ್ಯಾರ್ಥಿನಿ ಈತನ ಪ್ರಸ್ತಾಪ ತಿರಸ್ಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆತ ಆಕೆ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಆಗ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಬಂದು ಆಕೆಯನ್ನು ರಕ್ಷಿಸಿದ್ದಾರೆ. ವಿದ್ಯಾರ್ಥಿಗಳು ಬಳಿಕ ಪೊಲೀಸರಿಗೆ ಸುದ್ದಿ ತಿಳಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಪೆರಿಯಾರ್ ಹಾಸ್ಟೆಲ್ ನ 142ನೇ ಕೋಣೆಯಲ್ಲಿ ವಾಸಿಸುತ್ತಿದ್ದ ಶಹ್ನಾವಾಜ್ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 (ಎ) ಹಾಗೂ 509 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವರ್ಷ ಸಹ ಅನ್ಮೊಲ್ ರತನ್ ಎಂಬಾತ 28 ವರ್ಷದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.
Leave A Reply