ಪಾಕಿಸ್ತಾನಿ ಧ್ವಜ ಹಾರಿಸಿದವರ ವಿರುದ್ಧ ತನಿಖೆ, ಕ್ರಮಕ್ಕೆ ಯೋಗಿ ಆದಿತ್ಯನಾಥ ಆದೇಶ!
ಲಖನೌ: ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ, 26/11ರ ದಾಳಿ ರೂವಾರಿ ಹಫೀಜ್ ಸಯೀದ್ ಬಿಡುಗಡೆ ಬಳಿಕ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಿಸಿ, ಪಾಕಿಸ್ತಾನದ ಧ್ವಜ ಹಾರಿಸಿದವರ ವಿರುದ್ಧ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶಿಸಿದ್ದಾರೆ.
ಉತ್ತರ ಪ್ರದೇಶದ ಬೇಗಮ್ ಭಾಗ್ ಎಂಬಲ್ಲಿ ಮುಸ್ಲಿಂ ಯುವಕರು ಸಂಭ್ರಮಾಚರಿಸಿ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಲ್ಲದೆ, ಪಾಕಿಸ್ತಾನದ ಧ್ವಜ ಹಾರಿಸಿರುವ ಕುರಿತು ಸೂಕ್ತ ತನಿಖೆ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಯೋಗಿ ಆದಿತ್ಯನಾಥ ಅವರು, ದೇಶದ ಭದ್ರತೆ, ಸಮಗ್ರತೆ, ಜನರ ರಕ್ಷಣೆ ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನಮ್ಮ ಸರ್ಕಾರ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ. ಹಾಗಾಗಿ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ನವೆಂಬರ್ 24ರಂದು ಹಫೀಜ್ ಸಯೀದ್ ನನ್ನು ಗೃಹಬಂಧನದಿಂದ ಪಾಕಿಸ್ತಾನ ಬಿಡುಗಡೆಗೊಳಿಸಿದ ಬಳಿಕ ಮುಸ್ಲಿಂ ಯುವಕರು ಸಂಭ್ರಮಾಚರಣೆ ನಡೆಸಿದ್ದರು. ಈ ಕುರಿತು ಪೊಲೀಸರು ಇದುವರೆಗೂ ಎಫ್ಐಆರ್ ದಾಖಲೆ ಅಥವಾ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.
Leave A Reply