ಇಂದಿನಿಂದ ಅಯೋಧ್ಯೆ ವಿವಾದ ವಿಚಾರಣೆ, ಹಿಂದೂಗಳಿಗಿದೆಯೇ ಸಿಹಿ ಸುದ್ದಿ?
ಬಾಬ್ರೀ ಮಸೀದಿ ಧ್ವಂಸ ಪ್ರಕರಣಕ್ಕೆ 25 ವರ್ಷ ತುಂಬಲು ಒಂದೇ ದಿನ ಬಾಕಿ ಇರುವ ಮೊದಲೇ ಸುಪ್ರೀ ಕೋರ್ಟ್ ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ಅಂತಿಮ ವಿಚಾರಣೆಯನ್ನು ಮಂಗಳವಾರದಿಂದ ಆರಂಭಿಸಲಿದೆ ಎಂದು ತಿಳಿದುಬಂದಿದೆ.
2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ 13 ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಬ್ದುಲ್ ನಜೀರ್, ನ್ಯಾ.ಅಶೋಕ್ ಭೂಷಣ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ಅಂತಿಮ ವಿಚಾರಣೆ ನಡೆಸಲಿದೆ.
2010ರಲ್ಲಿ ಅಲಹಾಬಾದ್ ಹೈಕೋರ್ಟ್ ಪ್ರಕರಣದ ಕುರಿತು ಮಹತ್ತರ ತೀರ್ಪು ನೀಡಿದ್ದು, 2.77 ಎಕರೆ ಇರುವ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಹಾಗೂ ನಿರ್ಮೋಹಿ ಅಖಾಡಕ್ಕೆ ಸಮಾನ ಹಂಚಿಕೆ ಮಾಡಿತ್ತು. ಆದರೂ ಸಮಾಧಾನವಾಗದ ಕೆಲವರು ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದಾಗ್ಯೂ ಪ್ರಕರಣದ ವಿಚಾರಣೆಯನ್ನು ಕೊನೆಯ ಬಾರಿ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
1992ರ ಡಿಸೆಂಬರ್ 6ರಂದು ಬಾಬ್ರೀ ಮಸೀದಿ ಧ್ವಂಸಗೊಳಿಸಲಾಗಿತ್ತು. ಈಗಾಗಲೇ ಉತ್ತರ ಪ್ರದೇಶ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಂಗ್ಲೀಷಿಗೆ ಭಾಷಾಂತರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದೆ.
Leave A Reply