ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದವನ ಹತ್ಯೆ ಮಾಡಿದ ಪೊಲೀಸರು!
ಜೈಪುರ: ರಾಜಸ್ಥಾನದ ಅಲ್ವರ್ ಜಿಲ್ಲೆಯಲ್ಲಿ ಅಕ್ರಮವಾಗಿ ಗೋವು ಸಾಗಣೆ ಮಾಡುತ್ತಿದ್ದ ತಂಡದ ಮೇಲೆ ಪೊಲೀಸರು ದಾಳಿ ಮಾಡಿದ್ದು, ಶಂಕಿತನೊಬ್ಬನನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
ಸುಮಾರು ಐದರಿಂದ ಏಳು ಜನ ಟ್ರಕ್ ನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿದ್ದು, ರಸ್ತೆಗಳನ್ನು ಬ್ಲಾಕ್ ಮಾಡಿದ್ದಾರೆ. ಆದರೆ ಅಕ್ರಮ ಗೋ ಸಾಗಣೆದಾರರು ಬ್ಯಾರಿಕೇಡ್ ಮುರಿದು ಟ್ರಕ್ ನುಗ್ಗಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪ್ರಕಾಶ್ ತಿಳಿಸಿದ್ದಾರೆ.
ಗೋ ಸಾಗಣೆದಾರರು ಬ್ಯಾರಿಕೇಡ್ ನುಗ್ಗಿಸಿ ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಹಿಂಬಾಲಿಸಿದ್ದಾರೆ. ಆಗ ಪೊಲೀಸರು ಗುಂಡು ಹಾರಿಸಿದ್ದು, ಒಬ್ಬನಿಗೆ ತಗುಲಿದೆ. ತೀವ್ರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ಉಳಿದವರು ಪರಾರಿಯಾಗಿದ್ದು, ಗೋವುಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ವೇಳೆ ಗೋವುಗಳಿಗೂ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.
ನವೆಂಬರ್ 10ರಂದು ಸಹ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿತ್ತು.
Leave A Reply