ಕಾಶ್ಮೀರದಲ್ಲಿ ರಾತ್ರೋರಾತ್ರಿ ಉಗ್ರರ ವಿರುದ್ಧ ಕಾರ್ಯಾಚರಣೆ, ಇಬ್ಬರ ಹತ್ಯೆ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನೆ ನಡೆಸಿದ ಸಮರ ಮುಂದುವರಿದಿದ್ದು, ರಾತ್ರೋರಾತ್ರಿ ಕೈಗೊಂಡ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.
ಬಾರಾಮುಲ್ಲಾದ ಬೊಮೈಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭಿಸಿದ ಸೇನೆ, ಕೇವಲ ಎರಡೇ ತಾಸಿನಲ್ಲಿ ಕಾರ್ಯಾಚರಣೆ ಮುಗಿಸಿದ್ದು, ಇಬ್ಬರನ್ನು ಹತ್ಯೆ ಮಾಡಿದೆ.
ಹತ್ಯೆಯಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿರಬಹುದು ಎಂದು ಭದ್ರತಾ ಸಿಬ್ಬಂದಿ ಶಂಕಿಸಿದ್ದು, ದಾಳಿ ವೇಳೆ ಮತ್ತೊಬ್ಬ ಉಗ್ರನಿಗೆ ಗಾಯಗಳಾಗಿವೆ. ಆತನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಏಪ್ರಿಲ್ ನಿಂದ ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿದ ಭಾರತೀಯ ಸೇನೆ ಇದುವರೆಗೆ ಈ ಇಬ್ಬರು ಉಗ್ರರನ್ನೂ ಸೇರಿ 205 ಉಗ್ರರನ್ನು ಹತ್ಯೆ ಮಾಡಿದೆ. ಆದಾಗ್ಯೂ ಸೇನೆಯ ಕಾರ್ಯಾಚರಣೆಯಿಂದ ಗಡಿಯಲ್ಲಿ ಒಳನುಸುಳುವಿಕೆ ಹಾಗೂ ಕಾಶ್ಮೀರದಲ್ಲಿ ಕಲ್ಲು ತೂರಾಟ ಪ್ರಕರಣಗಳು ಸಹ ಕಡಿಮೆಯಾಗಿವೆ ಎಂದು ತಿಳಿದುಬಂದಿದೆ.
Leave A Reply