ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಬಿಜೆಪಿಗೆ ಸ್ಪಷ್ಟ ಬಹುಮತ
ಗಾಂಧಿನಗರ: 2019ರ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿಸಲಾಗಿರುವ ಗುಜರಾತ್ ವಿಧಾನಸಭೆ ಚುನಾವಣೆ ಮುಗಿಯುತ್ತಲೇ ಚುನಾವಣೋತ್ತರ ಸಮೀಕ್ಷೆ ಬಿಡುಗಡೆಯಾಗಿದ್ದು, ಬಿಜೆಪಿಗೇ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.
ಟೈಮ್ಸ್ ನೌ ಮತ್ತು ವಿಎಂಆರ್ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗಿದ್ದು, ಮತಪೆಟ್ಟಿಗೆಯಲ್ಲಿ ಬಿಜೆಪಿಗೇ ಹೆಚ್ಚು ಮತಗಳು ಭದ್ರವಾಗಿವೆ ಎಂದು ತಿಳಿದಿದೆ.
ಸಮೀಕ್ಷೆಯ ಪ್ರಕಾರ ಗುಜರಾತಿನಲ್ಲಿ ಬಿಜೆಪಿಗೆ 105 ರಿಂದ 110 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಿಗಲಿದ್ದು, ಕಾಂಗ್ರೆಸ್ 65-70 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಹಿರಂಗವಾಗಿದೆ. ಒಟ್ಟು 182 ವಿಧಾನಸಭೆ ಕ್ಷೇತ್ರಗಳ ಪೈಕಿ ಯಾವುದೇ ಪಕ್ಷ ಸರ್ಕಾರ ರಚಿಸಲು 93 ಸ್ಥಾನಗಳ ಅಗತ್ಯವಿದೆ. ಆದಗ್ಯೂ ಚುನಾವಣೆ ಪೂರ್ವ ನಡೆಸಿದ ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿಯೇ ಗೆಲುವು ಸಾಧಿಸಲಿದೆ.
ಅಲ್ಲದೆ, ಡಿಸೆಂಬರ್ 18ರಂದು ಮತದಾನ ನಡೆಯಲಿದ್ದು, ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿಯೇ ಗೆಲ್ಲಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.
Leave A Reply