ಚೀನಾಕ್ಕೆ ಸೆಡ್ಡು ಈಶಾನ್ಯ ರಾಜ್ಯಗಳಿಗೆ ಮೋದಿ 90 ಸಾವಿರ ಕೋಟಿ ಕೊಡುಗೆ
ಶಿಲ್ಲಾಂಗ್: ಈಶಾನ್ಯ ರಾಜ್ಯಗಳ ವಿಚಾರದಲ್ಲಿ ಪದೇ ಪದೆ ಖ್ಯಾತೆ ತೆಗೆಯುವ ಚೀನಾ ಪ್ರಧಾನಿ ನರೇಂದ್ರ ಮೋದಿ ಇಂದು ಭಾರಿ ಶಾಕ್ ನೀಡಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ಧಿಗೆ ವಿರೋಧ ವ್ಯಕ್ತಡಿಸುತ್ತಿದ್ದ ಚೀನಾ ತಕ್ಕ ಉತ್ತರ ನೀಡಿರುವ ಮೋದಿ ಈಶಾನ್ಯ ರಾಜ್ಯಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ 90 ಸಾವಿರ ಕೋಟಿ ರೂಪಾಯಿ ನೀಡಿದ್ದಾರೆ.
ರಸ್ತೆ ಮತ್ತು ರಾಜ್ಯ, ರಾಷ್ಟ್ರ ಹೆದ್ದಾರಿಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ನೀಡಿದ್ದಾರೆ. ಈ ಮೂಲಕ ಚೀನಾಕ್ಕೆ ಪರೋಕ್ಷವಾಗಿ ಸೆಡ್ಡುವ ಹೊಡೆಯುವ ದೂರದೃಷ್ಟಿಯು ನರೇಂದ್ರ ಮೋದಿ ಹೊಂದಿದ್ದಾರೆ. ಗುಡಗಾಡು ಪ್ರದೇಶಗಳೇ ಹೆಚ್ಚಾಗಿರುವ ಈಶಾನ್ಯ ರಾಜ್ಯಗಳಲ್ಲಿ ಸಾರಿಗೆ ಸಮಸ್ಯೆ ತೀವ್ರವಾಗಿದ್ದು ಅದನ್ನು ನಿವಾರಿಸಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಮೀಜೋರಾಂನ ಐಜ್ವಾಲದಲ್ಲಿ ಶುಕ್ರವಾರ ನಡೆದ ಟೋರಿಯಲ್ ಹೈಡ್ರೋ ಎಲೆಕ್ಟ್ರಿಕ್ ಪ್ರೋಜೆಕ್ಟ್ ಉದ್ಘಾಟಿಸಿ ಮಾತನಾಡಿ, ನಾನು 2014ರಲ್ಲಿ ಅಧಿಕಾರ ಸ್ವೀಕರಿಸುವ ನನ್ನ ಸಚಿವರಿಗೆ ಪ್ರತಿ 15 ದಿನಕ್ಕೊಮ್ಮೆ ಒಬ್ಬರು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಬೇಕು ಎಂದು ಹೇಳಿದ್ದೆ. ಅದರಂತೆ ನಡೆದುಕೊಳ್ಳುತ್ತಿದ್ದೇವೆ. ನಮ್ಮ ಸಚಿವರು ಇಲ್ಲಿಗೆ ಭೇಟಿ ನೀಡಿ, ಜನರೊಂದಿಗೆ ಸಂವನ ನಡೆಸಿ, ಅವರ ನೋವಿಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಈಶಾನ್ಯ ರಾಜ್ಯಗಳ ಪ್ರಮುಖ ಪಟ್ಟಣಗಳಾದ ಶಿಲ್ಲಾಂಗ್ ಮತ್ತು ತುರಾಗಳನ್ನು ಸಂಪರ್ಕಿಸಿ ಆರ್ಥಿಕ ಚೈತನ್ಯ ನೀಡುವ ಗುರಿ ಹೊಂದಲಾಗಿದೆ. ನಮ್ಮ ಧ್ಯೇಯವೇ ಸುಸಜ್ಜಿತ ಸಾಗಣೆ ವ್ಯವಸ್ಥೆ ಕಲ್ಪಿಸುವುದು ಮತ್ತು ಪರಿವರ್ತನೆ ತರುವುದು. ಈಶಾನ್ಯ ರಾಜ್ಯಗಳಲ್ಲಿ ನಾಲ್ಕು ಸಾವಿರ ಕಿ.ಲೋ ಮೀಟರ್ ಹೆದ್ದಾರಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
Leave A Reply