ಕಾಂಗ್ರೆಸ್ ಹರಕು ನಾಲಿಗೆ ಬಗ್ಗೆ ಮೌನ ಮುರಿದ ಜಮ್ಮು-ಕಾಶ್ಮೀರ ಮಾಜಿ ಸಿಎಂ!
ಶ್ರೀನಗರ: ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಹರಿಬಿಟ್ಟ ಹರಕು ನಾಲಿಗೆ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮೌನ ಮುರಿದಿದ್ದು, ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಿದ್ದಾರೆ.
ಕಾಂಗ್ರೆಸ್ ಗುಜರಾತಿನಲ್ಲಿ ಸುಧಾರಿತ ಪ್ರದರ್ಶನ ನೀಡಿದೆ ನಿಜ. ಆದರೆ ಕಾಂಗ್ರೆಸ್ಸಿನ ಕೆಲವು ನಾಯಕರು ಬಾಯಿಗೆ ಬಂದಹಾಗೆ ಮಾತನಾಡಿದ ಕಾರಣ ಕಾಂಗ್ರೆಸ್ಸಿಗೆ ಚುನಾವಣೆಯಲ್ಲಿ ಹಿನ್ನಡೆಯಾಯಿತು ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದಾರೆ.
ಆದಾಗ್ಯೂ, ಕಾಂಗ್ರೆಸ್ ಪರ ಒಲವಿರುವ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕರು ಹೀಗೆ ನಾಲಿಗೆ ಹರಿಬಿಡದಿದ್ದರೆ ಮುನ್ನಡೆ ಸಾಧಿಸಬಹುದಿತ್ತು ಎಂದಿದ್ದಾರೆ. ಅಂದ ಹಾಗೆ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಫಾರೂಕ್ ಅವರಿಗೆ ಅಚ್ಚರಿ ಮೂಡಿಸಿಲ್ಲವಂತೆ!
ಗುಜರಾತ್ ಚುನಾವಣೆ ವೇಳೆ ಕಾಂಗ್ರೆಸ್ಸಿನ ಮಣಿಶಂಕರ್ ಅಯ್ಯರ್ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಅವರು ನೀಚ ಆದ್ಮಿ ಎಂದು ಟೀಕಿಸಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತಲ್ಲದೇ, ಕಾಂಗ್ರೆಸ್ ಮತ ಸೆಳೆಯಲು ಮಣಿಶಂಕರ್ ಅಯ್ಯರ್ ಅವರನ್ನು ಅಮಾನತುಗೊಳಿಸಿದ್ದರು. ಆಗ ಮಣಿಶಂಕರ್ ಅಯ್ಯರ್ ಬಗ್ಗೆ ಮಾತನಾಡದ ಫಾರೂಕ್ ಈಗ ಕಾಂಗ್ರೆಸ್ ಚುನಾವಣೆಯಲ್ಲಿ ಸೋತ ಬಳಿಕ ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ಕುರಿತು ಮೌನ ಮುರಿದಿದ್ದಾರೆ.
Leave A Reply