ಭಾರತದಲ್ಲಿದ್ದಾರೆ 40 ಸಾವಿರ ಅಕ್ರಮ ರೋಹಿಂಗ್ಯಾ ಮುಸ್ಲಿಮರು
Posted On December 20, 2017

ದೆಹಲಿ: ಭಾರತದಲ್ಲಿ 40 ಸಾವಿರ ರೋಹಿಂಗ್ಯಾಗಳು ಜೀವನ ನಡೆಸುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜೀಜು ಲೋಕಸಭೆಗೆ ತಿಳಿಸಿದ್ದಾರೆ. ಬರಹದ ಪ್ರಶ್ನೆಗೆ ಉತ್ತರಿಸಿದ ರಿಜೀಜು ‘ಕೇಂದ್ರ ಗೃಹ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬಹುತೇಕರು ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ. ಆದ್ದರಿಂದ ವಸ್ತುನಿಷ್ಠವಾಗಿ ಅಂಕಿ ಸಂಖ್ಯೆಗಳನ್ನು ಹೇಳಲಾಗದು ಎಂದು ತಿಳಿಸಿದ್ದಾರೆ.
ಇದುವರೆಗಿನ ಮಾಹಿತಿ ಪ್ರಕಾರ ದೇಶದಲ್ಲಿ 40 ಸಾವಿರ ರೋಹಿಂಗ್ಯಾಗಳು ಅಕ್ರಮವಾಗಿ ನುಸುಳಿ, ಅಕ್ರಮವಾಗಿ ಜೀವನ ನಡೆಸುತ್ತಿದ್ದಾರೆ. ಯಾರನ್ನು ಇದುವರೆಗೆ ಗಡಿಪಾರು ಮಾಡಿಲ್ಲ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಅಕ್ರಮವಾಸಿಗಳಿಗೆ ಉತ್ತಮ ರಕ್ಷಣೆ ಮತ್ತು ಸೂಕ್ತ ಸೌಲಭ್ಯ ನೀಡಲಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಸಮುದಾಯ ಮೆಚ್ಚುಗೆ ವ್ಯಕ್ತಪಡಿಸಿದೆ. ಭಾರತದಲ್ಲಿ ಅಕ್ರಮ ನಿವಾಸಿಗಳೊಂದಿಗೆ ವ್ಯವಹರಿಸಲು ಯಾವುದೇ ಶಾಸನದಲ್ಲೂ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Advertisement -
Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
June 27, 2022
Leave A Reply