ಬಾಲಕಿಯ ಅಶ್ಲೀಲ ಚಿತ್ರ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಮುಸ್ಲಿಂ ವ್ಯಕ್ತಿ, ಬಾಲಕಿ ಆತ್ಮಹತ್ಯೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಬಾಲಕಿಯ ಚಿತ್ರವನ್ನು ಕಂಪ್ಯೂಟರ್ ಮೂಲಕ ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ವಿಕೃತಿ ಮೆರೆದಿದ್ದಾನೆ. ಇದರಿಂದ ಮನನೊಂದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಶ್ಲೀಲ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಹಿನ್ನೆಲೆಯಲ್ಲಿ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ನೇಣು ಬಿಗಿದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಯುವತಿ ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಆರೋಪಿ ಫಾರೂಕ್ ಮೊಂಡಾಲ್ ಪರಾರಿಯಾಗಿದ್ದಾನೆ ಎಂದು ಉಸ್ತಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮೊಂಡಾಲ್ ಕಳೆದ ಎರಡು ತಿಂಗಳಿನಿಂದ ಬಾಲಕಿ ಶಾಲೆಗೆ ಹೋಗುವಾಗ ಬರುವಾಗ ಛೇಡಿಸುತ್ತಿದ್ದ. ಇಷ್ಟಾದರೂ ಬಾಲಕಿ ಸೊಪ್ಪು ಹಾಕದ ಕಾರಣ ಆಕೆಯ ಫೋಟೋ ತೆಗೆದು ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆದಾಗ್ಯೂ ದೇಶಾದ್ಯಂತ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ, ಮತಾಂತರಗೊಳಿಸುವ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣವೂ ಹಿಂದೂ ಯುವತಿಯರಿಗೆ ಎಚ್ಚರಿಕೆಯ ಗಂಟೆಯಾಗಿದೆ ಹಾಗೂ ಪೊಲೀಸರು ಇಂಥವರ ಬಂಧನಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ.
Leave A Reply