• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುಜರಾತ್ ಗದ್ದುಗೆ ಏರಲು ಹಾರ್ದಿಕ್ ಹವಣಿಕೆ, ಸರ್ಕಾರ ಉರುಳಿಸಲು ಹುನ್ನಾರ

TNN Correspondent Posted On December 30, 2017


  • Share On Facebook
  • Tweet It

ಗಾಂಧಿನಗರ: ಗುಜರಾತ್ ನಲ್ಲಿ ಶತಾಯಗತಾಯ ಬಿಜೆಪಿಯನ್ನು ಹಣಿಯಲೇ ಬೇಕು ಎಂದು ಹುನ್ನಾರ ಹೂಡಿರುವ ಹಾರ್ದಿಕ್ ಪಟೇಲ್ ಇದೀಗ ಮತ್ತೊಂದು ದಾಳ ಉರುಳಿಸಿದ್ದಾರೆ. ಆದರೆ ಹಾರ್ದಿಕ ನಡೆಯ ಹಿಂದೆ ಜನಹಿತಕ್ಕಿಂತ ಕೇವಲ ಅಧಿಕಾರ ದಾಹದ ತಹತಹಿಕೆ ಎದ್ದು ಕಾಣುತ್ತಿದೆ. ಗುಜರಾತ್ ನ ಬಿಜೆಪಿ ಸರ್ಕಾರ ಉರುಳಿಸುವ ದುಷ್ಟ ಕಾರ್ಯಕ್ಕೆ ಹಾರ್ದಿಕ್ ಕೈ ಹಾಕಿದ್ದಾರೆ.

ಬಿಜೆಪಿ ವಿರುದ್ಧ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಪಾಟೀದಾರ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್, ಇದೀಗ ಅದೇ ಜಾತಿಯ ಕಾರ್ಡ್ ಇಟ್ಟುಕೊಂಡು ಗುಜರಾತ್ ಸರ್ಕಾರವನ್ನು ಬೀಳಿಸುವ ಹುನ್ನಾರ ಮಾಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ವಿಜಯರೂಪಾನಿ ಮತ್ತು ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಮಧ್ಯೆ ಬಿರುಕು ಹುಟ್ಟಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಹಾರ್ದಿಕ್ ಪಟೇಲ್ ಪ್ರಯತ್ನಿಸುತ್ತಿದ್ದಾರೆ.

ಶತಾಯಗತಾಯ ಬಿಜೆಪಿ ಅಧಿಕಾರಕ್ಕೆ ಏರಲು ಬಿಡಬಾರದು ಎಂದು ಎಷ್ಟೇ ಶ್ರಮಿಸಿದರೂ, ವಿಫಲವಾಗಿದ್ದ ಹಾರ್ದಿಕ್, ಅಲ್ಪೇಶ್, ಜಿಗ್ನೇಶ್ ಮೇವಾನಿ ಇದೀಗ ಸರ್ಕಾರ ಉರುಳಿಸಲು ವಾಮಮಾರ್ಗ ಹಿಡಿದಿದ್ದಾರೆ. ಪಾಟೀದಾರ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಗುಜರಾತ್ ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಅವರನ್ನು ಆಮಿಷ ಒಡ್ಡಿದ್ದಾರೆ. ಬಿಜೆಪಿಯಿದ 10 ಶಾಸಕರನ್ನು ಕರೆದುಕೊಂಡು ಬಂದರೆ ಕಾಂಗ್ರೆಸ್ ಸರ್ಕಾರ ರಚಿಸಿ, ಉನ್ನತ ಹುದ್ದೆ ಒದಗಿಸಲಾಗುತ್ತದೆ ಎಂದು ಆಮಿಷ ಒಡ್ಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಹಾರ್ದಿಕ್ ಬಿಜೆಪಿಯಲ್ಲಿರುವ ಪಟೇಲ್ ಸಮುದಾಯದ ಶಾಸಕರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಹುನ್ನಾರವನ್ನು ಕೂಡ ಮಾಡುತ್ತಿದ್ದಾರೆ ಎನ್ನಲಾಗಿದೆ. ಪಟೇಲ್ ಜಾತಿಯನ್ನೇ ಇಟ್ಟುಕೊಂಡು ಹಾರ್ದಿಕ್ ಮತ್ತೊಂದು ರಾಜಕೀಯ ದಾಳ ಉರುಳಿಸಿದ್ದಾರೆ. ಅಧಿಕಾರಕ್ಕೇರಲು ಜಾತಿ ಮುಖಂಡರ ತಲೆ ಕೆಡಿಸುವ ವಾಮಮಾರ್ಗವನ್ನು ಹಿಡಿದಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಾಂಗ್ರೆಸ್ ಹಾರ್ದಿಕ್ ಪಟೇಲ್ ಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದು, ಹೇಗಾದರೂ ಮಾಡಿ ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಕಾಂಗ್ರೆಸ್, ಹಾರ್ದಿಕ್ ಪಟೇಲ್ ಮತ್ತು ಜಿಗ್ನೇಶ್ ಮೇವಾನಿ ಭಾರಿ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಅದರ ಮುನ್ನುಡಿಯೇ ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಅವರನ್ನು 10 ಶಾಸಕರೊಂದಿಗೆ ಆಗಮಿಸಿ ಎಂದು ಆಮಿಷ ಒಡ್ಡಿದ್ದಾರೆ ಎನ್ನಲಾಗಿದೆ.

ಗುಜರಾತ್ ನ 182 ಸ್ಥಾನಗಳಲ್ಲಿ ಬಿಜೆಪಿ 99 ಸ್ಥಾನ,  ಕಾಂಗ್ರೆಸ್ 77 ಸ್ಥಾನ ಮತ್ತು ಪಕ್ಷೇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಗುಜರಾತ್ ವಿಧಾನಸಭೆ ಗದ್ದುಗೆ ಏರಲು 92 ಸ್ಥಾನಗಳು ಬೇಕು. ಇದೀಗ ಕಾಂಗ್ರೆಸ್ ನ 77, ಪಕ್ಷೇತರ 6 ಸ್ಥಾನ ಮತ್ತು ಬಿಜೆಪಿಯಿಂದ ನಿತೀನ್ ಪಟೇಲ್ 10 ಶಾಸಕರನ್ನು ಕರೆದುಕೊಂಡು ಬಂದರೆ ಸರ್ಕಾರ ರಚಿಸುವ ಲೆಕ್ಕಾಚಾರ ಹಾರ್ದಿಕ್ ಪಟೇಲ್ ಅವರದ್ದು ಎನ್ನಲಾಗಿದೆ.

ಪಟೇಲ್ ಸಮುದಾಯದ ಜನರ ಹಿತ ಕಾಪಾಡಲು ಸರ್ಕಾರಕ್ಕೆ ಒತ್ತಡ ಹೇರಬೇಕಿದ್ದ ಹಾರ್ದಿಕ್ ಪಟೇಲ್ ವಾಮಮಾರ್ಗದ ಮೂಲಕ ಆಡಳಿತದ ಗದ್ದುಗೆ ಏರಲು ಪ್ರಯತ್ನಿಸುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search