ಉತ್ತರ ಪ್ರದೇಶ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಯೋಗಿ ಸರ್ಕಾರ ಆದೇಶ
ಲಖನೌ: ಉತ್ತರ ಪ್ರದೇಶ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರ ವಿಧಾನಸಭೆಯ ಮೇಲ್ಮನೆ, ಕೆಳಮನೆ, ರಾಜ್ಯ ಮಟ್ಟದ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು, ಮಹಾನಗರ ಪಾಲಿಕೆಗಳು, ಸರ್ಕಾರಿ ಶಾಲೆಗಳು ಸೇರಿ ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಡಿಸೆಂಬರ್ 6 ರಂದು ಸೂಚನೆ ಹೊರಡಿಸಲಾಗಿತ್ತು. ಆದರೂ ಕೆಲವ ಕಚೇರಿಗಳಲ್ಲಿ ಸರಿಯಾಗಿ ಪಾಲನೆ ಮಾಡಿರಲಿಲ್ಲ. ಆದ್ದರಿಂದ ಬಾರಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಶೀಘ್ರದಲ್ಲಿ ಅಂಬೇಡ್ಕರ್ ಭಾವಚಿತ್ರಗಳನ್ನು ಅಳವಡಿಸಬೇಕು ಎಂದು ಹೇಳಿದೆ. ಅಲ್ಲದೇ ಅಂಬೇಡ್ಕರ್ ಜನ್ಮದಿನ, ಮಹಾ ಪರಿನಿರ್ವಾಣ ದಿನಗಳನ್ನು ಆಚರಿಸುವಾಗ ಚಿತ್ರ ಕಡ್ಡಾಯವಾಗಿ ಇರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಬಿಜೆಪಿ ದಲಿತ ವಿರೋಧಿ ಎನ್ನುವ ವಿರೋಧ ಪಕ್ಷಗಳಿಗೆ ಈ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಕ್ಕ ಉತ್ತರ ನೀಡಿದ್ದು, ಕೇವಲ ಭಾವಚಿತ್ರವಷ್ಟೇ ಅಲ್ಲ, ದಲಿತರ ಏಳಿಗೆಗೆ, ರಕ್ಷಣೆಗೆ ಇನ್ನು ಹೊಸ ಅಸ್ತ್ರಗಳು ಹೊರ ಬರಲಿವೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ಮತ್ತು 2017 ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ದಲಿತರು ಬಿಜೆಪಿ ಭಾರಿ ಬೆಂಬಲ ನೀಡಿದ್ದರು. ಅಲ್ಲದೇ ದಲಿತರ ಪಕ್ಷ ಎಂದೇ ಗುರುತಿಸಿಕೊಂಡಿದ್ದ ಬಹುಜನ್ ಸಮಾಜ ಪಾರ್ಟಿಯನ್ನು ಬಿಟ್ಟು ಜನರ ಬಿಜೆಪಿ ಮತ ನೀಡಿದ್ದರು. ದಲಿತರು ಬಿಜೆಪಿ ಮೇಲೆ ವಿಶ್ವಾಸವಿಟ್ಟಿದ್ದು, ಅದನ್ನು ಕಾಯ್ದುಕೊಂಡು ಹೋಗಲಾವುದು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ಈ ನಿರ್ಧಾರಕ್ಕೆ ದಲಿತರು ಸೇರಿ ಉತ್ತರ ಪ್ರದೇಶದ ಎಲ್ಲ ವರ್ಗದ ಜನರು ಸಂತಸ ವ್ಯಕ್ತಪಡಿಸಿದ್ದಾರೆ.
Leave A Reply