ಡೋನಾಲ್ಡ್ ಟ್ರಂಪ್ ಭಾರತದ ಮುಖವಾಣಿಯಂತೆ: ಭಾರತದ ಕಟು ವಿರೋಧಿಗಳ ಬಾಯಲ್ಲಿ ಹೀಗೊಂದು ಮಾತು
ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ವಿರುದ್ಧ ಭಾರತ ಮಾತನಾಡುವ ದಾಟಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಕ್ವಾಜಾ ಆಸೀಫ್ ಹೇಳಿದ್ದಾರೆ.
ಅಮೆರಿಕದಿಂದ ಪಾಕಿಸ್ತಾನಕ್ಕೆ ನೀಡುವ ಹಣಕಾಸಿನ ನೆರವನ್ನು ಭಯೋತ್ಪಾಧಕರಿಗೆ ಆಶ್ರಯ ನೀಡಲು ಬಳಸಿಕೊಳ್ಳಲಾಗುತ್ತಿದೆ ಎಂದು ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವ ಕ್ವಾಜಾ ಆಸೀಫ್ ‘ಅಮೆರಿಕ ಪಾಕಿಸ್ತಾನಕ್ಕೆ 33 ಶತಕೋಟಿ ಡಾಲರ್ ನೀಡಿದೆ ಎಂಬುದು ಆಧಾರರಹಿತವಾದದ್ದು ಎಂದು ಹೇಳಿದ್ದಾರೆ.
ಟ್ರಂಪ್ ಪಾಕಿಸ್ತಾನದ ಕಡು ವಿರೋಧಿ ಭಾರತದ ದಾಟಿಯಲ್ಲಿ ಪಾಕಿಸ್ತಾನದ ವಿರುದ್ಧ ಮಾತನಾಡುತ್ತಿದ್ದಾರೆ. ಟ್ರಂಪ್ ಆಡಳಿತ ಸತ್ಯವನ್ನು ಮರೆಮಾಚುತ್ತಿದೆ. ವಿಶೇಷವಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ವಿಷಯದ ಕುರಿತು ಅಮೆರಿಕ ಸುಳ್ಳು ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ಭಯೋತ್ಪಾದನೆ ವಿರುದ್ಧ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ನಮಗೆ ಯಾರಿಂದಲೂ ಪಾಠ ಬೇಕಿಲ್ಲ. ಯಾವುದೇ ಭಯೋತ್ಪಾದಕ ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ. ಅಫ್ಘಾನಿಸ್ತಾನದ ವಿವಾದವನ್ನು ನಾವು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಶ್ರಮಿಸುತ್ತಿದ್ದೇವೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Leave A Reply