• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗದತ್ತ ಮುಸ್ಲಿಂ ಮಹಿಳೆಯರ ಚಿತ್ತ

TNN Correspondent Posted On January 5, 2018
0


0
Shares
  • Share On Facebook
  • Tweet It

ಲಖನೌ:  ಮುಸ್ಲಿಂ ಮಹಿಳೆಯರು ಯೋಗ ಮಾಡಬಾರದು, ಯೋಗ ತರಬೇತಿ ಕೇಂದ್ರಗಳಿಗೆ ಹೋಗಬಾರದು ಎಂಬ ಮುಸ್ಲಿಂ ಮೌಲ್ವಿಗಳ ಫತ್ವಾದ ಮಧ್ಯೆ ಹಲವು ಮಹಿಳೆಯರು ಯೋಗದತ್ತ ಮನಸ್ಸು ವಾಲಿಸುತ್ತಿದ್ದಾರೆ. ವಿಶೇಷವಾಗಿ ಇತ್ತೀಚೆಗೆ ಯೋಗ ಶಿಕ್ಷಕಿಗೆ ಫತ್ವಾ ಹೊರಡಿಸಿದ್ದರಿಂದ, ಯೋಗಾಭ್ಯಾಸಕ್ಕೆ ಮುಂದಾಗಿರುವ ಮಹಿಳೆಯರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಫತ್ವಾ ವಿರೋಧಿಸಿ ಯೋಗ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಯುವತಿಯೊಬ್ಬಳು ಮಾತನಾಡಿ ‘ಯೋಗ ಮಾನಸಿಕ, ದೈಹಿಕ ರೋಗಗಳಿಗೆ ಪರಿಹಾರ ನೀಡುತ್ತದೆ. ದೇಹಸ್ಥಿತಿಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾಳೆ.

ಫತ್ವಾ ಹೊರಡಿಸಿದ್ದರಿಂದ ಸ್ಫೂರ್ತಿ ಪಡೆದಿರುವ ಮುಸ್ಲಿಂ ಯುವತಿಯರು ಉತ್ತರ ಪ್ರದೇಶದ ರಾಂಪುರದ ಗುಲ್ಶನ್ ವೆಲಫೇರ್ ಸೊಸೈಟಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೇವಲ ಮಹಿಳೆಯರಿಗೆ ಮೀಸಲಾಗಿ ತರಗತಿಯನ್ನು ನಡೆಸಲಾಗುತ್ತಿದ್ದು, ಯಾವುದೇ ಧರ್ಮದ ನಿಬಂಧನೆಗಳು ಈ ಕೇಂದ್ರದಲ್ಲಿ ಇಲ್ಲ. ಈ ಕೇಂದ್ರದಲ್ಲಿ ಅತಿ ಹೆಚ್ಚು ಮುಸ್ಲಿಂ ಯುವತಿಯರೇ ಬರುತ್ತಿರುವುದು ವಿಶೇಷ. ಎಲ್ಲರಿಗೂ ಯೋಗದಿಂದ ಸದೃಡ ಆರೋಗ್ಯ ಕಾಪಾಡಿಕೊಳ್ಳುತ್ತೇವೆ ಎಂಬ ಭರವಸೆ ಮೂಡಿದೆ.

ಕೆಲವು ದಿನಗಳಿಂದ ಯೋಗ ತರಬೇತಿ ಪಡೆಯುತ್ತಿರುವ ಹಲವು ಮಹಿಳೆಯರಲ್ಲಿ ಕಾಣಿಸಿಕೊಂಡಿದ್ದ ಕಾಲಿನ ಕೀಲು ನೋವು ಸೇರಿ ನಾನಾ ಸಮಸ್ಯೆಗಳು ಕಡಿಮೆಯಾಗಿವೆ ಎಂದು ಹೇಳಿಕೊಂಡಿದ್ದಾರೆ. ಕಳೆದ ವರ್ಷದ ಜಾರ್ಖಂಡ್ ನ ರಾಂಚಿಯ ಮುಸ್ಲಿಂ ಯೋಗ ಶಿಕ್ಷಕಿ ವಿರುದ್ಧ ಫತ್ವಾ ಹೊರಡಿಸಲಾಗಿತ್ತು, ಅಲ್ಲದೇ ತರಬೇತಿ ನೀಡುವುದನ್ನು ನಿಲ್ಲಿಸುವಂತೆ ಮನೆ ಮೇಲೆ ದಾಳಿ ನಡೆಸಲಾಗಿತ್ತು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search