ಜಲೀಲ್ ಕರೋಪಾಡಿ ಹತ್ಯಾ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು
Posted On January 6, 2018

ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯಾ ಪ್ರಕರಣದ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2017 ರ ಎಪ್ರಿಲ್ 20 ರಂದು ಜಲೀಲ್ ಕರೋಪಾಡಿಯನ್ನು ಅವರ ಗ್ರಾಮ ಪಂಚಾಯತ್ ಕಚೇರಿಯಲ್ಲಿಯೇ ಹತ್ಯೆ ಮಾಡಲಾಗಿತ್ತು. ಆ ಹತ್ಯಾ ಪ್ರಕರಣದಲ್ಲಿ ಪೊಲೀಸರು ತಕ್ಷಣ 11 ಮಂದಿಯನ್ನು ಬಂಧಿಸಿ ಜೈಲು ಕಂಬಿಗಳ ಹಿಂದೆ ಕಳುಹಿಸಿದ್ದರು. ಈ ಪ್ರಕರಣದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ದಿನೇಶ್ ಶೆಟ್ಟಿ ಈ ಕೊಲೆಯ ಮಾಸ್ಟರ್ ಮೈಂಡ್ ಎಂದು ಜಲೀಲ್ ಮನೆಯವರು ಆರೋಪಿಸಿದ್ದರು. ಉಸ್ತುವಾರಿ ಸಚಿವ ರಮಾನಾಥ್ ರೈ ಅವರಿಗೆ ಘೇರಾವ್ ಹಾಕಿ ಸ್ಥಳೀಯ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಕೂಡ ನಡೆಸಿದ್ದರು. ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಅಂತಿಮವಾಗಿ ಭಾರತದ ಸವೋರ್ಚ ನ್ಯಾಯಾಲಯ ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿಗಳಾದ ಬಸವಪ್ರಭು ಪಾಟೀಲ್, ಶೈಲೇಶ್ ಮಡಿಯಾಳ್ ಹಾಗೂ ಅರುಣ್ ಶ್ಯಾಂ ವಾದಿಸಿದ್ದರು.
- Advertisement -
Leave A Reply