2019ರ ಲೋಕಸಭೆ ಚುನಾವಣೆಗೆ ಮೋದಿ, ಶಾ ಸಿದ್ಧತೆ ಆರಂಭ, ಇಂದು ನಡೆಯಲಿದೆ ಸಭೆ
ದೆಹಲಿ: ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಲು ಅಡಿಯಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ. ಮುನ್ನುಡಿ ಎಂಬಂತೆ ಇಂದು ದೆಹಲಿಯಲ್ಲಿ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
ಸಭೆಗೆ ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ರಾಜ್ಯಾಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಗುರುವಾರ ಭೋಜನ ಕೂಟ ಏರ್ಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ಈ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರದ ಎಲ್ಲ ಸಚಿವರು, ಹಿರಿಯ ಮುಖಂಡ ರಾಮ್ ಲಾಲ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ‘ಯಾವ ಯಾವ ರಾಜ್ಯಗಳಲ್ಲಿ ಬಿಜೆಪಿ ಸ್ಥಿತಿ ಗತಿ ಹೇಗಿದೆ, ಕೇಂದ್ರ ಸರ್ಕಾರದ ಯೋಜನೆಗಳ ಪ್ರಭಾವ ಹೇಗಿದೆ. ಬೇರೆ ಬೇರೆ ರಾಜ್ಯಗಳ ಯೋಜನೆಗಳ ಪ್ರಭಾವ ಮತ್ತು ಪ್ರಮುಖಾಂಶಗಳು ವೈಫಲ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಮಧ್ಯಪ್ರದೇಶ, ಚತ್ತಿಸಗಡ್ ರಾಜಸ್ಥಾನ, ತ್ರಿಪುರಾ, ಮೇಘಾಲಯ ಮತ್ತು ಮಿಜೋರಾಮ್ ಸೇರಿ 2018ರಲ್ಲಿ ಬರುವ ವಿಧಾನಸಭೆ ಚುನಾವಣೆ ಮೇಲೆ ವಿಶೇಷ ಗಮನ ಹರಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಇನ್ನು 2000 ವರ್ಷದಲ್ಲಿ ಜನಿಸಿದ ಯುವ ಮತದಾರರನ್ನು ಗುರಿಯಾಗಿಟ್ಟುಕೊಂಡು, ಅವರನ್ನು ಸೆಳೆಯಲು ತಂತ್ರ ರೂಪಿಸುವುದು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಲೋಕಸಭೆ ಚುನಾವಣೆಗೆ ಸಿದ್ಧತೆ ಹೇಗೆ ನಡೆಸಬೇಕು ಎಂಬ ಚರ್ಚೆ ನಡೆಯಲಿದೆ ಎನ್ನಲಾಗಿದೆ.
Leave A Reply