ಅವಹೇಳನಕಾರಿ ಹೇಳಿಕೆ, ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ದೂರು
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಲೇ ಬಾಯಿ ಹರಿಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ದೂರು ನೀಡಿದೆ.
ಶಾಸಕ, ಬಿಜೆಪಿ ಮುಖಂಡ ಸುರೇಶ್ ಕುಮಾರ್ ಎಸ್. ಹಾಗೂ ಪಿ.ಎನ್.ಸದಾಶಿವ ಅವರು ಕಾಂಗ್ರೆಸ್ಸಿನ ಈ ಇಬ್ಬರು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಇಬ್ಬರು ನಾಯಕರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನಹಾನಿ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿ, ಆರೆಸ್ಸೆಸ್ ಹಾಗೂ ಬಜರಂಗದಳದ ಕಾರ್ಯಕರ್ತರೇ ಭಯೋತ್ಪಾದಕರು” ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.
ಈ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಬಿಜೆಪಿ ಮುಖಂಡ ಸಂಬೀತ್ ಪಾತ್ರ ಅವರು ಸಹ ಖಂಡಿಸಿದ್ದು, “ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಈ ರೀತಿ ಹೇಳಿಕೆ ನೀಡಿದ್ದು ಸರಿಯಲ್ಲ. ಇದು ಅವರ ಹಿಂದುಗಳ ವಿರೋಧಿ ಧೋರಣೆಯನ್ನು ಎತ್ತಿತೋರಿಸುತ್ತದೆ” ಎಂದಿದ್ದಾರೆ.
Leave A Reply