ಯೋಗಿ ಮುಸ್ಲಿಂ ವಿರೋಧಿ ಎನ್ನುವವರೇ ಕೇಳಿ, ಮದರಸಾ ಅಭಿವೃದ್ಧಿಗೆ ನಿರ್ಧರಿಸಿದ್ದಾರೆ ಯುಪಿ ಸಿಎಂ
ಲಖನೌ: ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದಾಗಿನಿಂದ ಉತ್ತರ ಪ್ರದೇಶದಲ್ಲಿ ಮುಸ್ಲಿಮರನ್ನು ದೇಶವನ್ನೇ ಬಿಟ್ಟು ಓಡಿಸುತ್ತಾರೆ ಎಂಬ ಮಟ್ಟಕ್ಕೆ ಅಪಪ್ರಚಾರ ಮಾಡಲಾಗಿತ್ತು. ಆದರೆ ಯೋಗಿ ಆದಿತ್ಯನಾಥ್ ನಾನು ಹಿಂದೂ ರಕ್ಷಕ ಮುಸ್ಲಿಂ ವಿರೋಧಿಯಲ್ಲ ಎಂಬುದನ್ನು ತಮ್ಮ ಮಾತಿನಲ್ಲಷ್ಟೇ ಅಲ್ಲ ಕಾರ್ಯರೂಪಕ್ಕೂ ತಂದಿದ್ದಾರೆ. ಇದೀಗ ಯೋಗಿ ಮುಸ್ಲಿಮರ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾದ ಮದರಸಾಗಳ ಅಭಿವೃದ್ಧಿಗೆ ಅದಕ್ಕೆ ಮತ್ತೊಂದು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ.
ಲಖನೌನಲ್ಲಿ ನಡೆದ ಒಂಬತ್ತು ರಾಜ್ಯಗಳ ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಮದರಸಾಗಳನ್ನು ಮುಚ್ಚುವುದರಿಂದ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ. ಇಸ್ಲಾಂ ಶಿಕ್ಷಣ ಸಂಸ್ಥೆಗಳ ಜತೆಗೆ ಸಂಸ್ಕೃತ ಪಾಠಶಾಲೆಗಳು ಆಧುನಿಕ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸೂಕ್ತ ಸ್ಪರ್ಧೆ ಎದುರಿಸಲು ಸಾಧ್ಯ ಎಂದು ಹೇಳಿದ್ದಾರೆ.
ಕಾಲಕ್ಕೆ ತಕ್ಕಂತೆ ಮದರಸಾ ಮತ್ತು ಸಂಸ್ಕೃತ ಪಾಠಶಾಲೆಗಳನ್ನು ಬದಲಾಯಿಸಬೇಕು. ಸಾಂಪ್ರದಾಯಿಕ ಶಿಕ್ಷಣದೊಂದಿಗೆ ಕಂಪ್ಯೂಟರ್, ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ಶಿಕ್ಷಣವನ್ನು ನೀಡಿ ಮಕ್ಕಳ ಜ್ಞಾನಾಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇತ್ತೀಚೆಗೆ ಉತ್ತರ ಪ್ರದೇಶ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸಿಂ ರಿಜ್ವಿ ಮದರಸಾಗಳಲ್ಲಿ ಉಗ್ರ ತರಬೇತಿ ನೀಡಲಾಗುತ್ತಿದೆ. ಅವುಗಳನ್ನು ಶಿಕ್ಷಣ ಪದ್ದತಿ ಬದಲಾಯಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಬರೆದಿದ್ದರು.
ಮೂಲಭೂತವಾದಿಗಳ ಸೆಳೆತಕ್ಕೆ ಸಿಲುಕಿ ದಾರಿ ತಪ್ಪಿರುವ ಯುವಕರಿಗೆ ಆಧುನಿಕ ಶಿಕ್ಷಣ ನೀಡಿ, ಸಮಾಜದ ಉನ್ನತಿಗೆ ಶ್ರಮಿಸಬೇಕು . ಎಲ್ಲರಿಗೂ ಉತ್ತಮ ಶಿಕ್ಷಣ ನೀಡಬೇಕು. ಆಗ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದರು.
Leave A Reply