ಜಮ್ಮು-ಕಾಶ್ಮೀರದಲ್ಲಿ ಐಸಿಸ್ ಉಗ್ರರ ಕರಿನೆರಳು, ಶಂಕಿತೆಯ ಬಂಧನ
ಶ್ರೀನಗರ: ಜಮ್ಮು-ಕಾಶ್ಮೀರ ಎಂದರೆ ಉಗ್ರರ ಬೀಡು ಎಂಬಂತೆ ಬಿಂಬಿಸುತ್ತಿರುವ ಹಾಗೂ ಅದಕ್ಕೆ ತಕ್ಕಂತೆ ಉಗ್ರರೂ ಕಾಣಿಸಿಕೊಳ್ಳುವ ಪ್ರದೇಶದಲ್ಲಿ ಐಸಿಸ್ ಉಗ್ರ ಸಂಘಟನೆಗೆ ಸೇರಿದ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.
ದಕ್ಷಿಣ ಕಾಶ್ಮೀರದಲ್ಲಿ 18 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಈಕೆ ಆತ್ಮಹತ್ಯಾ ಬಾಂಬರ್ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಮಹಿಳೆಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುನೀರ್ ಖಾನ್ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಮಹಿಳೆಯ ಕುರಿತು ಯಾವುದೇ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿರುವ ಪೊಲೀಸ್ ಮಹಾ ನಿರ್ದೇಶಕರು, “ಮಹಿಳೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನಮ್ಮ ಗುಪ್ತಚರ ಸಂಸ್ಥೆಯ ಸಹೋದರ ಸಂಸ್ಥೆಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದ ಬಳಿಕವೇ, ಮಹಿಳೆ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.
ಬಂಧಿತಳನ್ನು ಸಾದಿಯಾ ಅನ್ವರ್ ಶೇಖ್ ಎಂದು ಗುರುತಿಸಲಾಗಿದ್ದು, ಪುಣೆ ಮೂಲದವಳಾಗಿದ್ದಾಳೆ. ಇವಳು ಇತ್ತೀಚೆಗೆ ಕಾಶ್ಮೀರಕ್ಕೆ ಬಂದು ನೆಲೆಸಿದ್ದು, ಐಸಿಸ್ ಉಗ್ರರ ಜತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ತಿಳಿದುಬಂದಿದೆ.
Leave A Reply