ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತರೊಬ್ಬರ ಹತ್ಯೆ, ಸಿಎಂ ಸಾಹೇಬ್ರೇ ಏನ್ ಮಾಡ್ತಿದ್ದೀರಿ?
ಬೆಂಗಳೂರು: ಲವ್ ಜಿಹಾದ್ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ವಿಷಯದಲ್ಲಿ ಕರ್ನಾಟಕ ಮತ್ತೊಂದು ಕೇರಳದ ರೀತಿಯಾಗುತ್ತಿದ್ದು, ಬೆಂಗಳೂರಿನಲ್ಲೇ ಮತ್ತೊಬ್ಬ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
ಜೆಸಿ ನಗರದ ಚೆನ್ನಪ್ಪ ಗಾರ್ಡನ್ ಬಳಿ ಪೂಲ್ ಒಂದರಲ್ಲಿ ಬಿಜೆಪಿ ಕಾರ್ಯಕರ್ತರ ಸಂತೋಷ್ (28) ಶವ ಪತ್ತೆಯಾಗಿದ್ದು, ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ವಾಸೀಮ್ ಮತ್ತವರ ತಂಡವೇ ಸಂತೋಷ್ ಮೇಲೆ ದಾಳಿ ಮಾಡಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದ್ದು, ಸಂತೋಷ್ ಬಿಜೆಪಿ ಕಾರ್ಯಕರ್ತರಾಗಿದ್ದು, ಸಂಘಟನೆಯಲ್ಲಿ ತೊಡಗಿದ್ದರು ಎಂಬ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಅಷ್ಟೇ ಅಲ್ಲ, ಫೆಬ್ರವರಿ ನಾಲ್ಕರಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂತೋಷ್ ನಗರದಲ್ಲಿ ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ ಕಟ್ಟುವುದರಲ್ಲಿ ನಿರತರಾಗಿದ್ದರು. ಆಗ ದಾಳಿ ಮಾಡಿ ಹತ್ಯೆಗೈಯಲಾಗಿದೆ ಎಂದು ತಿಳಿದುಬಂದಿದೆ.
ಅತ್ತ ಬೇರೆ ರಾಜ್ಯಗಳ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಸಂತೋಷ್ ಸೇರಿ 22 ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದ್ದರೂ, ಕ್ರಮ ಕೈಗೊಂಡಿಲ್ಲ. ಈಗ ಮತ್ತೊಬ್ಬ ಯುವಕ ಸಂತೋಷ್ ಹತ್ಯೆಯಾಗಿದ್ದು, ಇನ್ನಾದರೂ ಸಿಎಂ ಎಚ್ಚೆತ್ತುಕೊಳ್ಳಬೇಕಾಗಿದೆ.
Leave A Reply