ಕೇಂದ್ರದ ಬಜೆಟ್ ಶ್ಲಾಘಿಸಿದ ನೊಬೆಲ್ ಪ್ರಶಸ್ತಿ ಪುರಸ್ಕೃತರ ಬಗ್ಗೆ ತಿಳಿಯಲೇಬೇಕು..!
ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ದೇಶಾದ್ಯಂತ ಬಾರಿ ಪ್ರತಿಕ್ರಿಯೆಗಳು ಮೂಡಿವೆ. ಇನ್ನು ವಿರೋಧ ಪಕ್ಷಗಳು ತಮ್ಮ ರಾಜಕೀಯಕ್ಕಾಗಿ, ಅತೃತ್ಮ ಆತ್ಮಗಳಂತೆ ಆಡುತ್ತಿವೆ. ಆದರೆ ದೇಶದ ಸಾಮಾನ್ಯ ಜನರು ಮೋದಿ ಬಜೆಟ್ ನಿಂದ ಸಂತುಷ್ಟರಾಗಿದ್ದಾರೆ. ಎಂಬುವುದಕ್ಕೆ ನೊಬೆಲ್ ಪ್ರಶಸ್ತಿ ಪಡೆದಿರುವ ಮಹಾನ್ ವ್ಯಕ್ತಿ ನೀಡಿದ ಹೇಳಿಕೆ.
ಕೈಲಾಶ್ ಸತ್ಯಾರ್ಥಿ
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದವರು. ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿರುವ ಕೈಲಾಶ್ ಸತ್ಯಾರ್ಥಿ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನ್ನು ಸ್ವಾಗತಿಸಿದ್ದಾರೆ. ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಶೇ.15 ರಷ್ಟು ಪ್ರಮಾಣವನ್ನು ಹೆಚ್ಚಿಸಿರುವುದು ಹೊಸ ಭಾಷ್ಯ ಬರೆದಿದೆ ಎಂದು ಹೊಗಳಿದ್ದಾರೆ.
ಇನ್ನು ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವ ಡಿಜಿಟಲ್ ಇಂಡಿಯಾ ಕಲ್ಪನೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯಲ್ಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆ ಮಾಡಲು ನಿರ್ಧರಿಸಿದ್ದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ. ಅಲ್ಲದೇ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲೂ ಬಜೆಟ್ ಪೂರಕವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ನಾವು ಮಕ್ಕಳ ಮೇಲೆ ಹೂಡುವ ಹಣ ಕೇವಲ ಸಾಮಾಜಿಕ ನ್ಯಾಯ ಕಲ್ಪಿಸಲು ಅಷ್ಟೇ ಅಲ್ಲ, ಭವಿಷ್ಯದಲ್ಲಿ ಆರ್ಥಿಕ ಸಾಹಯವನ್ನು ನೀಡಲಿದೆ. ಅದನ್ನು ಅರ್ಥ ಮಾಡಿಕೊಂಡು ಮಕ್ಕಳ ಅಭಿವೃದ್ಧಿ ಸರ್ವರು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.
Leave A Reply